ಕೊಡಗು ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡದೊಂದಿಗೆ ಡಾ.ಪುಟ್ಟರಾಜು, ಡಾ.ಜಯಂತಿ ಇದ್ದರು.
ಕುಶಾಲನಗರ: ಕೊಡಗು ವಿಶ್ವವಿದ್ಯಾಲಯ ಮಟ್ಟದ ಪುರುಷರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದಾರೆ.
ದ್ವಿತೀಯ ಬಹುಮಾನವನ್ನು ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಥಮ, ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದುಕೊಂಡರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಅಂತರ್ ಕಾಲೇಜು ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನೂ ಆಯೋಜಿಸಲಾಗಿತ್ತು. ಒಟ್ಟು 12 ತಂಡಗಳು ಭಾಗವಹಿಸಿದ್ದವು. ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಗಳಿಸಿದರು.
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪಂದ್ಯಾವಳಿ ಆಯೋಜಿಸಲಾಗಿತ್ತು. ಕಾಲೇಜು ಪ್ರಾಂಶುಪಾಲ ಡಾ.ಪುಟ್ಟರಾಜು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಡಾ.ಜಯಂತಿ, ಸಿಬ್ಬಂದಿ ಇದ್ದರು.