ಕೂಡಿಗೆ ಬಳಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬವನ್ನು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್ ಉದ್ಘಾಟಿಸಿದರು. ಬಿಆರ್‌ಸಿ ಎಂ.ವಿ.ಮಂಜೇಶ್, ಮುಖ್ಯ ಶಿಕ್ಷಕಿ ತಾರಾಮಣಿ, ಶಿಕ್ಷಕರ ಸಂಘದ ಪ್ರಮುಖರಾದ ಯೋಗೇಶ್, ಪ್ರಸನ್ನಕುಮಾರ್, ಟಿ.ಕೆ.ಬಸವರಾಜ್, ಶಿವಶಂಕರ, ಎಸ್‌ಡಿಎಂಸಿ ಅಧ್ಯಕ್ಷೆ ಧರಣಿ ಇತರರಿದ್ದರು. 
ಕೊಡಗು

ಕಲಿಕಾ ಹಬ್ಬದಲ್ಲಿ ಕೌಶಲ ಪ್ರದರ್ಶಿಸಿದ ಮಕ್ಕಳು

ಕುಶಾಲನಗರ: ತಾಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬ ಸಡಗರ ಸಂಭ್ರಮದಿಂದ ನಡೆಯಿತು.
1ರಿಂದ 5ನೇ ತರಗತಿಯವರೆಗಿನ ಮಕ್ಕಳಿಗೆ ಏರ್ಪಡಿಸಿದ್ದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲಗಳುಳ್ಳ ಚಟುವಟಿಕೆ ಪ್ರದರ್ಶಿಸಿ ಗಮನ ಸೆಳೆದರು.
ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ. ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.
ಸ್ಥಳೀಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ಮಕ್ಕಳ ಕಲಿಕಾ ಹಬ್ಬ ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಮೂಲಕ ಹೆಚ್ಚು ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲ ಕೌಶಲಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು , ಶೈಕ್ಷಣಿಕ ಪರಿಸರದ ಬೆಂಬಲ ವ್ಯವಸ್ಥೆ ಗಟ್ಟಿಯಾದರೆ ಮಕ್ಕಳಿನ ಕಲಿಕೆ ವೃದ್ಧಿಯಾಗುತ್ತದೆ ಎಂದರು.
ಕಲಿಕಾ ಹಬ್ಬದಲ್ಲಿ ಮಕ್ಕಳ ಕಲಿಕಾ ಪ್ರೇರಣೆ ಕುರಿತು ಮಾತನಾಡಿದ ಕೂಡುಮಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳ ಕಲಿಕಾ ಮಟ್ಡವನ್ನು ಉತ್ತಮಪಡಿಸಲು ಹಮ್ಮಿಕೊಂಡಿರುವ ವಿಶಿಷ್ಟ ಕಾರ್ಯಕ್ರಮ ಇದಾಗಿದೆ ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಎಸ್.ಎ.ಯೋಗೇಶ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್, ಸಿಆರ್‌ಪಿ ಕೆ.ಶಾಂತಕುಮಾರ್ ಮಾತನಾಡಿದರು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ಧರಣಿ ವಹಿಸಿದ್ದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಶಿವಶಂಕರ್, ಶಿಕ್ಷಕರಾದ ಎಚ್.ವಿ.ಲತಾಮಣಿ, ಎಸ್.ಸಿ.ಶ್ವೇತಾ, ಮಹದೇವಕುಮಾರ್, ನಿವೃತ್ತ ಶಿಕ್ಷಕಿ ಟಿ.ಎಸ್.ವಿನೋದಾ, ಗ್ರಾಪಂ ಸದಸ್ಯ ಚಂದ್ರು, ಎಸ್‌ಡಿಎಂಸಿ ಸದಸ್ಯರಾದ ಧನಂಜಯ, ಚೇತನ್, ಮಂಜೇಶ, ಮಣಿ, ಜ್ಯೋತಿ, ಕೃಷಿಕರಾದ ಗುರುಪಾದಸ್ವಾಮಿ, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ಮಕ್ಕಳಿಂದ ಪ್ರತಿಭಾ ಪ್ರದರ್ಶನ: ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯಿಂದ ಬಂದಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಂದ ಶಿಕ್ಷಕರ ಜತೆ ಆಗಮಿಸಿದ್ದ ಮಕ್ಕಳು ತಾವು ಕಲಿತ್ತಿದ್ದ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಕಲಿಕಾ ಹಬ್ಬದಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪಾಲಕರು ಕಾಗದದ ಟೋಪಿ ಧರಿಸಿ ಗಮನ ಸೆಳೆದರು.
‘ಪ್ರಶ್ನೆಯು ಪ್ರಜ್ಞೆಯಾಗಲಿ’ ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ 13 ಸರ್ಕಾರಿ ಪ್ರಾಥಮಿಕ ಶಾಲೆಗಳ 1ರಿಂದ 5ನೇ ತರಗತಿಯ ಮಕ್ಕಳು ಭಾಗವಹಿಸಿದ್ದರು.