ಕುಶಾಲನಗರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಫಾತಿಮ ಪ್ರೌಢಶಾಲೆಯಲ್ಲಿ ಶಿಕ್ಷಕರಿಗೆ ಏರ್ಪಡಿಸಿದ್ದ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಬಿಇಓ ಎಂ.ಕೃಷ್ಣಪ್ಪ ಉದ್ಘಾಟಿಸಿ ಮಾತನಾಡಿದರು. ಎಚ್.ಎಸ್.ಚೇತನ್, ಕೆ.ಎ.ಜಾನ್ ಸನ್, ಯದುಕುಮಾರಿ, ಎಚ್.ಎನ್.ಮಂಜುನಾಥ್, ಟಿ.ಕೆ.ಬಸವರಾಜ್, ರತ್ನಕುಮಾರ್, ಟಿ.ವಿ.ಶೈಲಾ, ಟಿ.ಈ.ವಿಶ್ವನಾಥ್ ಇತರರು ಇದ್ದರು.
ಕುಶಾಲನಗರ: ಶಿಕ್ಷಕರು ನಿರಂತರ ವಿದ್ಯಾರ್ಥಿ ಇದ್ದಂತೆ, ತಮ್ಮ ಬೋಧನಾ ಸಾಮರ್ಥ್ಯವನ್ನು ಉಳಿಸಿ ಬೆಳೆಸಿಕೊಳ್ಳಲು ನಿರಂತರ ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಂಡರೆ ಕ್ರಿಯಾಶೀಲತೆಯು ತನ್ನಿಂತಾನೆ ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಹೇಳಿದರು.
ಶಿಕ್ಷಕರ ಕಲ್ಯಾಣ ನಿಧಿ ಹಾಗೂ ಶಿಕ್ಷಣ ಇಲಾಖೆಯ ತಾಲೂಕು ಕಚೇರಿಯ ವತಿಯಿಂದ ಮಂಗಳವಾರ ಸ್ಥಳೀಯ ಫಾತಿಮಾ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿರು.
ಕಲಿಕೆಯ ಬಂಡವಾಳದೊಂದಿಗೆ ಸಹಪಠ್ಯಗಳ ಸಹಾಯವನ್ನು ಅವುಗಳಲ್ಲಿ ಭಾಗಿಯಾಗುವುದರ ಮೂಲಕ ಪಡೆದು ದೈಹಿಕ ಸಾಮರ್ಥ್ಯ ಹಾಗೂ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕೆಂದರಲ್ಲದೆ, ಇದು ಬೋಧನೆಗೂ ಸಹ ಬಹಳಷ್ಟು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟರು. ಸಹಪಠ್ಯ ಚಟುವಟಿಕೆಗಳಿಂದ ವೈಯಕ್ತಿಕ ಮಾನಸಿಕ ಸಂತೃಪ್ತಿ ದೊರಕಲಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಚೇತನ್, ಇಂತಹ ಚಟುವಟಿಕೆಗಳಿಂದ ಶಿಕ್ಷಕರು ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲು ಸಾಧ್ಯವಾಗುತ್ತವೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅವು ಸಹಾಯ ಮಾಡುತ್ತವೆ ಎಂದರು.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎನ್.ಮಂಜುನಾಥ್, ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಉಪಾಧ್ಯಕ್ಷೆ ಎಸ್.ಕೆ.ಸೌಭಾಗ್ಯಾ, ಕಾರ್ಯದರ್ಶಿ ಕವಿತಾ, ನಿರ್ದೇಶಕಿ ಎಚ್.ಎಸ್.ಉಮಾದೇವಿ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ಕಾರ್ಯದರ್ಶಿ ಟಿ.ವಿ.ಶೈಲಾ, ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಟಿ.ಎಸ್.ಶಶಿಕುಮಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್.ಸುಕುಮಾರಿ, ಶಾಲಾ ಮುಖ್ಯ ಶಿಕ್ಷಕ ಕೆ.ಎ.ಜಾನ್ ಸನ್, ಶಿಕ್ಷಣ ಸಂಯೋಜಕಿ ಯದುಕುಮಾರಿ, ಸಿ.ಆರ್.ಪಿ., ಟಿ.ಈ.ವಿಶ್ವನಾಥ್, ನಿವೃತ್ತ ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ಇದ್ದರು.