ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕರಾದ ಡಾ.ಮಂತರ್‌ಗೌಡ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ತೆನ್ನಿರಾ ಮೈನಾ, ರಾಜೇಶ್ ಯಲ್ಲಪ್ಪ, ಎಚ್.ಎ.ಹಂಸ ಇತರರಿದ್ದರು. 
ಕೊಡಗು

ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಚಾಲನೆ

ಪ್ರಮುಖ ಮುಖ್ಯಾಂಶಗಳು

  • ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಚಾಲನೆ
ಮಡಿಕೇರಿ: ನಗರದ ಹೊರ ವಲಯದಲ್ಲಿರುವ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ೪.೮೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಯಂ ಚಾಲಿತ ಚಾಲನಾ ಪಥ ಕಾಮಗಾರಿಗೆ ಶಾಸಕರಾದ ಡಾ.ಮಂತರ್‌ಗೌಡ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕರು ಸುಮಾರು ೪.೮೩ ಕೋಟಿ ವೆಚ್ಚದಲ್ಲಿ ೨.೧೨ ಎಕರೆ ಜಾಗದಲ್ಲಿ ಕಾಮಗಾರಿ ನಿರ್ಮಾಣವಾಗಲಿದೆ ಎಂದರು.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಉತ್ತಮ ವಾಹನ ಚಾಲನೆ ಮಾಡಲು ಸಹಕಾರವಾಗುತ್ತದೆ. ಈ ಕಾಮಗಾರಿಯು ಘನ ಸರ್ಕಾರದಿಂದ ಅನುಮೋದನೆ ಪಡೆಯಲಾಗಿದ್ದು, ಇದಕ್ಕೆ ಸಹಕರಿಸಿದ ಮಾನ್ಯ ಸಾರಿಗೆ ಸಚಿವರಿಗೆ ಧನ್ಯವಾದ ತಿಳಿಸಿದರು.
ಈ ಸಂದರ್ಭ ಕಾಮಗಾರಿಯ ವಿವರಣೆಯನ್ನು ಎಂಜಿನಿಯರ್, ಮೈಸೂರು ವಿಭಾಗ ಅವರು ವಿವರಣೆ ನೀಡುತ್ತಾ, ಈ ಕಾಮಗಾರಿಯನ್ನು ಕೆ.ಎಸ್.ಆರ್.ಟಿ.ಸಿ.(ಸಿ.ಇ. ವಿಭಾಗ) ಬೆಂಗಳೂರು, ಇವರು ನಿರ್ವಹಿಸಲಿದ್ದು, ಮಳೆಯನ್ನು ಹೊರತುಪಡಿಸಿ, ೧೨ ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ತೆನ್ನಿರಾ ಮೈನಾ ಮಾತನಾಡಿ, ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರು ಹೆಚ್ಚಿನ ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಎಚ್.ಎ.ಹಂಸ, ಪ್ರಕಾಶ್ ಆಚಾರ್ಯ, ವಿ.ಜಿ.ಮೋಹನ್, ಜಾನ್ಸನ್ ಪಿಂಟೋ, ಕೋಚನ ಚೇತನ್, ಹರಿಪ್ರಸಾದ್, ಕೊತ್ತೋಳಿ ಕವನ್, ಅರ್ಜುನ, ಶರಣ್, ಶಶಿ, ಸದಾಮುದ್ದಪ್ಪ, ಜಿ.ಸಿ.ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಇನ್ಸ್‌ಪೆಕ್ಟರ್ ಮೋಹನ್ ಕುಮಾರ್, ವ್ಯವಸ್ಥಾಪಕರಾದ ಸಲೀಮಾ, ಸೌಮ್ಯ, ರೀಟಾ, ಇತರರು ಇದ್ದರು.