ಕುಶಾಲನಗರ ಬಳಿಯ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಕಲಿಕಾ ಹಬ್ಬದಲ್ಲಿ ಬಿಇಒ ಎಂ.ಕೃಷ್ಣಪ್ಪ ಚಾಲನೆ ನೀಡಿದರು. ಟಿ.ಈ ವಿಶ್ವನಾಥ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮುಖ್ಯ ಶಿಕ್ಷಕಿ ಸಾಕಮ್ಮ, ಎಸ್‌ಡಿಎಂಸಿ ಅಧ್ಯಕ್ಷೆ ರಮ್ಯಾ ಇತರರು ಇದ್ದರು. 
ಕೊಡಗು

ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬ ಪೂರಕ

ಪ್ರಮುಖ ಮುಖ್ಯಾಂಶಗಳು

  • ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಹೇಳಿಕೆ
  • ಗುಮ್ಮನ ಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜನೆ
ಕುಶಾಲನಗರ: ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗಳಿಗೆ ಕಲಿಕಾ ಹಬ್ಬವು ಪೂರಕವಾಗಿದೆ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು.
ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕುಶಾಲನಗರ ಕ್ಲಸ್ಟರ್ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಹಾಗೂ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂತಸದಾಯಕ ಕಲಿಕೆಗೆ ಮಕ್ಕಳ ಹಬ್ಬವು ಸಹಕಾರಿಯಾಗಿದೆ. ಇದರಿಂದ ಮಕ್ಕಳಲ್ಲಿನ ಕಲಿಯುವಿಕೆಯ ಛಲ ವೃದ್ಧಿಯಾಗುತ್ತದೆ ಎಂದರು.
ಕೂಡುಮಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಲು ಸಹಕಾರಿಯಾಗಿರುವ ಮಕ್ಕಳ ಕಲಿಕಾ ಹಬ್ಬ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೂ ಉತ್ತಮ ವೇದಿಕೆ ಒದಗಿಸುತ್ತವೆ ಎಂದರು.
ಶಾಲಾ ಶಿಕ್ಷಕಿ ಎಚ್.ಎಚ್.ಸಾಕಮ್ಮ ಮಾತನಾಡಿ, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಕೌಶಲಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.
ಮಕ್ಕಳಿಂದ ವಿವಿಧ ಕಲಿಕಾ ಪ್ರದರ್ಶನ: ಕುಶಾಲನಗರ ಕ್ಲಸ್ಟರ್ ವ್ಯಾಪ್ತಿಯಿಂದ ಆಗಮಿಸಿದ್ದ ವಿವಿಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಂದ ಶಿಕ್ಷಕರ ಜತೆ ಆಗಮಿಸಿದ್ದ ಮಕ್ಕಳು ತಾವು ಕಲಿತಿದ್ದ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಈ.ವಿಶ್ವನಾಥ್, ನಿವೃತ್ತ ಶಿಕ್ಷಕಿ ಬಿ.ರಾಧಮ್ಮ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಜಿಲ್ಲಾ ಶಿಕ್ಷಣ ಇಲಾಖೆಯ ನೌಕರರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಸ್.ಆರ್.ಶಿವಲಿಂಗ, ವಿವಿಧ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ಎಸ್.ಕೆ. ಜಲಜಾಕ್ಷಿ, ಲಕ್ಷ್ಮೀ, ಶಾಲಾ ಶಿಕ್ಷಕರಾದ ಎನ್.ಎನ್.ಭಾರತಿ, ಟಿ.ಕೆ.ವನಜಾಕ್ಷಿ, ಕೆ.ಎ.ತಾರಾ, ಬಿ.ಇ.ಅಜಿತ್ ಕುಮಾರ್, ಎಸ್‌ಡಿ ಎಂಸಿ ಅಧ್ಯಕ್ಷೆ ಬಿ.ಜಿ.ರಮ್ಯಾ, ಸದಸ್ಯರಾದ ರೀಟಾ, ಸಲ್ಮಾ, ಗೀತಾಂಜಲಿ, ಶೋಭಾ, ಸಂಧ್ಯಾ ಮತ್ತು ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.