ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಎಚ್.ಎಂ. ವೆಂಕಟೇಶ, ಮಂಜೇಶ್ ಮತ್ತಿತರರಿದ್ದರು. 
ಕೊಡಗು

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಪನ್ಯಾಸ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ
  • ಬನಶಂಕರಿ ಇಕೋ ಕ್ಲಬ್
ಕುಶಾಲನಗರ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬನಶಂಕರಿ ಇಕೋ ಕ್ಲಬ್ ವತಿಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ‘ಪರಿಸರಕ್ಕಾಗಿ ಜೀವನ ಶೈಲಿ ಬದಲಾವಣೆ’ ವಿಷಯ ಕುರಿತು ಉಪನ್ಯಾಸ ನೀಡಿದರು.
ಸೋಮವಾರಪೇಟೆ ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಮಂಜೇಶ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಕ್ಕಳ ಜತೆ ಮಾಹಿತಿ ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಎಚ್.ಎಂ.ವೆಂಕಟೇಶ, ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಕೆ.ಎಸ್.ರಮ್ಯಾ, ಶಿಕ್ಷಕ ಶಿವಾನಂದ, ದೈಹಿಕ ಶಿಕ್ಷಣ ಶಿಕ್ಷಕಿ ವಂಜಮ್ಮ ಇತರರಿದ್ದರು.