ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ದಾನಿಗಳ ನೆರವಿನಿಂದ ನೀಡಿರುವ ಸ್ವೆಟರ್ ಗಳನ್ನು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ವಿತರಣೆ ಮಾಡಿದರು. 
ಕೊಡಗು

ಮಕ್ಕಳು ವಿದ್ಯೆಯನ್ನು ಇಷ್ಟಪಟ್ಟು ಕಲಿಯಲಿ

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ
  • ಸ್ವೆಟರ್ ವಿತರಣೆ ಕಾರ್ಯಕ್ರಮ
ಸುಂಟಿಕೊಪ್ಪ: ಮಕ್ಕಳು ವಿದ್ಯೆಯನ್ನು ಕಷ್ಟಪಟ್ಟು ಕಲಿಯದೆ ಇಷ್ಟಪಟ್ಟು ಕಲಿತು ಉತ್ತಮ ಪ್ರಜೆಗಳಾಗಿ ರೂಪುಗೊಂಡು ತಾವು ವಿದ್ಯೆ ಕಲಿತ ಶಾಲೆಗೆ ಮತ್ತು ಶಿಕ್ಷಕರಿಗೆ ಗೌರವ ತರುವಂತಹ ಕೆಲಸ ಮಾಡಬೇಕೆಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ ನೀಡಿದರು.
ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳಿಗೆ ಶನಿವಾರ ದಾನಿಗಳ ನೆರವಿನಿಂದ ನೀಡಿರುವ ಸ್ವೆಟರ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಶೈಕ್ಷಣಿಕ ವರ್ಷದಲ್ಲಿ 30 ಸಾವಿರ ಸ್ವಟರ್‌ಗಳ ವಿತರಣೆಯನ್ನು ಹಮ್ಮಿಕೊಂಡಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆಯ್ದುಕೊಳ್ಳಲಾಗಿದೆ. ನಂತರ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೂ ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಬ್ಯಾಗ್‌ಗಳನ್ನು ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಂಡವರು ನಾವು ಕಲಿತ ಶಾಲೆಯನ್ನು ಮರೆಯಬಾರದೆಂದು ಹೇಳಿದ ಅವರು ಸಾಧ್ಯವಾದಷ್ಟು ಸಹಾಯ ಮಾಡಬೇಕೆಂದು ಹೇಳಿದರು.
ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆ, 7ನೇ ಹೊಸಕೋಟೆಯ ದೀಪ್ತಿ ಶಾಲೆಗೆ ಶನಿವಾರ ಅಪ್ಪಚ್ಚು ರಂಜನ್ ಅವರು ಸ್ವಟರ್ ವಿತರಣೆ ಮಾಡಿದರು.
ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ನಿರುತಾ ಬೆಳ್ಳಿಯಪ್ಪ, 7ನೇ ಹೊಸಕೋಟೆ ಗ್ರಾ.ಪಂ.ಇ.ಬಿ.ಜೋಸೆಫ್, ಮಂಡಲ ಅಧ್ಯಕ್ಷ ಗೌತಮ್, ಯುವಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೆರೂರು, ಸುಂಟಿಕೊಪ್ಪ ನಗರಾಧ್ಯಕ್ಷ ಧನುಕಾವೇರಪ್ಪ, ದಾಸಂಡ ರಮೇಶ್, ಸಹದೇವನ್, ಮುರುಗನ್ ಹೊಸಕೋಟೆ, ಮುಖ್ಯೋಪಾಧ್ಯಾಯನಿ ಸಿಸ್ಟರ್ ಜೆಸಿಂತ ಜೋವಿಟಾ ವಾಸ್, ಕೊಡರಹಳ್ಳಿ ಶಾಂತಿನೀಕೇತನ ಶಾಲೆ ಮುಖ್ಯೋಪಾಧ್ಯಾಯನಿ ಕವಿತಾ, ದೀಪ್ತಿ ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಟೆಸ್ಸಿ ಮ್ಯಾನುವೆಲ್ ಇತರರು ಇದ್ದರು.