ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿತ್ತು. ಪಿಡಿಒ ಶಫೀಕ್, ಶಿಬಿರಾಧಿಕಾರಿ ಬಿ.ಎನ್. ಶಾಂತಿಭೂಷಣ್ ಇತರರು ಇದ್ದರು. 
ಕೊಡಗು

ಪರಿಸರ ಸಂರಕ್ಷಣೆ ಮನೆಯಿಂದಲೇ ಆರಂಭವಾಗಲಿ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • environmental protection
ವಿರಾಜಪೇಟೆ: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ ಎಂದು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಪಿಡಿಒ ಎ.ಎ.ಶಫೀಕ್ ತಿಳಿಸಿದರು.
ಕಲ್ತೋಡು ನಾಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿರುವ ವಿರಾಜಪೇಟೆ ಸೇಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದಲ್ಲಿ ಭಾನುವಾರ ಭಾಗಿಯಾಗಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಮನೆ ಮನೆಗಳಿಂದಲೂ ಆರಂಭವಾಗಬೇಕು. ಸ್ವಚ್ಛ ಪರಿಸರ ನಿರ್ಮಾಣದಿಂದ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಎನ್‌ಎಸ್‌ಎಸ್ ಘಟಕದ ವಿದ್ಯಾರ್ಥಿಗಳ ಕಾರ್ಯ ಪ್ರಶಂಸನೀಯ ಎಂದರು.
ಸೇಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ.ಮದಲೈ ಮುತ್ತು ಮಾತನಾಡಿ, ನಮ್ಮ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ವರ್ಷಪೂರ್ತಿ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ಕಲ್ತೊಡು ನಾಂಗಲ ಶಾಲೆಯಿಂದ ಆರಂಭಗೊಂಡ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಬಿಟ್ಟಂಗಾಲದ ಆರ್.ಕೆ.ಎಫ್ ವರೆಗೂ ನಡೆಯಿತು. ವಿದ್ಯಾರ್ಥಿಗಳು ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್, ಬಾಟಲ್, ಪೇಪರ್‌ಗಳನ್ನು ತೆಗೆದು ಪಂಚಾಯಿತಿ ಕಸದ ವಾಹನಕ್ಕೆ ಹಾಕಿದರು. ಶಿಬಿರಾಧಿಕಾರಿ ಬಿ.ಎನ್. ಶಾಂತಿಭೂಷಣ್, ಗ್ರಾಪಂ ಮಾಜಿ ಸದಸ್ಯ ಚಂಗೆಟ್ಟಿರ ಸೋಮಯ್ಯ, ಮಾಚಯ್ಯ, ಬಿಪಿನ್, ಉಪನ್ಯಾಸಕರಾದ ಜೇಮ್ಸ್ ಅಂತೋಣಿ, ನಮೃತಾ, ಶಶಿಕಲಾ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.