ಕೂಡಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಏರ್ಪಡಿಸಿದ್ದ ಮೂರು ದಿನಗಳ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವನ್ನು ಪಿಡಿಒ ಮಂಜುಳಾ ಉದ್ಘಾಟಿಸಿದರು. ಜಯಚಂದ್ರನ್, ಸುಜಾತ, ಪದ್ಮಶ್ರೀ, ಕಲ್ಪನಾ, ರತ್ನಮ್ಮ, ಸೌಮ್ಯ, ಬೇಬಿ ಮತ್ತಿತರರು ಇದ್ದರು. 
ಕೊಡಗು

ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲಿ

ಪ್ರಮುಖ ಮುಖ್ಯಾಂಶಗಳು

  • ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜಳಾ ಅಭಿಮತ
ಕುಶಾಲನಗರ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಸಂಜೀವಿನಿ ಒಕ್ಕೂಟ, ಜಿಲ್ಲಾ ಪಂಚಾಯಿತಿ , ತಾಲೂಕು ಪಂಚಾಯಿತಿ ಹಾಗೂ ಕೂಡಿಗೆ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕೂಡಿಗೆ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಮೂರು ದಿನಗಳ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರ ಕೂಡಿಗೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜಳಾ ಉದ್ಘಾಟನೆ ನೆರವೇರಿಸಿ ಮಾತಾನಾಡಿ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲು, ಮತ್ತು ಒಗ್ಗೂಡಿ ಒಕ್ಕೂಟದ ಮುಖೇನ ಸಾಲ ಸೌಲಭ್ಯಗಳನ್ನು ಪಡೆದು ತಮ್ಮ ಬದುಕನ್ನು ಉತ್ತಮಗೊಳಿಸಿಕೊಳ್ಳಲು ವಿವಿಧ ಹಂತಗಳಲ್ಲಿ ತರಬೇತಿ ಪಡೆದು ಮುಂದುವರೆಯಲು ಇಂತಹ ತರಬೇತಿ ಕಾರ್ಯಾಗಾರ ಉಪಯುಕ್ತವಾಗುತ್ತವೆ ಎಂದರು.
ತಾಲೂಕು ವ್ಯವಸ್ಥಾಪಕ ಜಯಚಂದ್ರನ್, ಸಂಪನ್ಮೂಲ ವ್ಯಕ್ತಿ ಮಡಿಕೇರಿ ಸುಜಾತ, ಮೇಲ್ವಿಚಾರಕಿ ಪದ್ಮಶ್ರೀ, ಕೂಡಿಗೆ ಒಕ್ಕೂಟದ ಅಧ್ಯಕ್ಷೆ ಕಲ್ಪನಾ, ಸದಸ್ಯರಾದ ರತ್ನಮ್ಮ, ಸೌಮ್ಯ, ಬೇಬಿ ಮತ್ತಿತರರು ಇದ್ದರು.