ಆಲೂರು ಸಿದ್ದಾಪುರ ರೋಟರಿ ಕ್ಲಬ್ ಸದಸ್ಯರು ಹಿತ್ಲುಗದ್ದೆ ಗ್ರಾಮದ ರೈತರ ಗದ್ದೆಯಲ್ಲಿ ನಾಟಿ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. 
ಕೊಡಗು

ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ

ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಹಿತ್ಲುಗದ್ದೆ ಗ್ರಾಮದ ವಿಜಯ್ ಅವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ರೋಟರಿ ಸಂಸ್ಥೆ ಸದಸ್ಯರು ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ರೋಟರಿ ಕ್ಲಬ್ ಅಧ್ಯಕ್ಷ ಸಂಪತ್ ಮಾತನಾಡಿ, ಸಮಾಜ ಸೇವೆ ಮತ್ತು ಸಮಾಜಮುಖಿ ಕಾರ್ಯವನ್ನು ಮಾಡುತ್ತಿರುವ ರೋಟರಿ ಸಂಸ್ಥೆ ಸಮಾಜದಲ್ಲಿ ಜನರ ಮನ್ನಣೆಗಳಿಸುತ್ತಿದೆ. ರೋಟರಿ ಸಂಸ್ಥೆಯು ಶಿಕ್ಷಣ, ಆರೋಗ್ಯ, ಪರಿಸರ, ಅರಣ್ಯ ಹಾಗೂ ಸಮಾಜದ ಅಭಿವೃದ್ಧಿಗೆ ಉತ್ತೇಜನ ನೀಡುತ್ತಿದೆ. ಈ ಮೂಲಕ ರೋಟರಿ ಸಂಸ್ಥೆಯ ಸದಸ್ಯರು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದ ಅವರು, ಆಲೂರು ಸಿದ್ದಾಪುರ ರೋಟರಿ ಸಂಸ್ಥೆ ಈ ಭಾಗದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಈ ಪೈಕಿ ಗದ್ದೆಯಲ್ಲಿ ಭತ್ತ ನಾಟಿ ಮಾಡುವ ಕಾರ್ಯಕ್ರಮವೂ ಒಂದಾಗಿದೆ ಎಂದು ಹೇಳಿದರು.
ರೋಟರಿ ಕ್ಲಬ್ ಕಾರ್ಯದರ್ಶಿ ಪಿ.ಕೆ.ಸತೀಶ್‌ಕುಮಾರ್, ಮುಂದಿನ ಸಾಲಿನ ಅಧ್ಯಕ್ಷ ವಿಜಯ್, ರೋಟರಿ ಕ್ಲಬ್ ಪ್ರಮುಖರಾದ ಉದಯ್ ಕುಮಾರ್, ದಯಾನಂದ್, ಕಿರಣ್ ಮತ್ತು ರೋಟರಿ ಸದಸ್ಯರು ಹಾಜರಿದ್ದರು.