ನಾಪೋಕ್ಲುವಿನ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ವತಿಯಿಂದ ಅಂಕುರ್ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ 27ನೇ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದಲ್ಲಿ ನಿವೃತ್ತ ಹವಾಲ್ದಾರ್ ಪಾಲಾಂದಿರ ಚಂಗಪ್ಪ ಅವರನ್ನು ಸನ್ಮಾನಿಸಲಾಯಿತು. ರತ್ನಾ ಚರ್ಮನ, ಸಿ.ತಿಮ್ಮಯ್ಯ, ಬಿ.ಕೆ.ಉತ್ತಪ್ಪ ಇತರರಿದ್ದರು.
ನಾಪೋಕ್ಲು: ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ನಾಪೋಕ್ಲು ವತಿಯಿಂದ ಇಲ್ಲಿಯ ಅಂಕುರ್ ಪಬ್ಲಿಕ್ ಸ್ಕೂಲ್‌ನಲ್ಲಿ 27ನೇ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಲಯನ್ಸ್ ಕ್ಲಬ್ ಅಧ್ಯಕ್ಷ ಬನ್ಸಿ ಭೀಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಹವಾಲ್ದಾರ್ ಪಾಲಾಂದಿರ ಚಂಗಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖರು ದಿನದ ಮಹತ್ವದ ಬಗ್ಗೆ ಮಾತನಾಡಿದರು. ಶಾಲೆಯ ಕಾರ್ಯದರ್ಶಿ ರತ್ನಾ ಚರ್ಮನ , ಲಯನ್ಸ್ ಕ್ಲಬ್ ಕಾರ್ಯದರ್ಶಿ ಸಿ.ತಿಮ್ಮಯ್ಯ, ಖಜಾಂಜಿ ಬಿ.ಕೆ.ಉತ್ತಪ್ಪ, ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಸದಸ್ಯರು ಹಾಜರಿದ್ದರು.