ಅರಕಲಗೂಡು ತಾಲೂಕಿನ ಬರಗೂರು ಗ್ರಾಮದಲ್ಲಿ ಡಿವೈಡರ್‌ಗೆ ಲಾರಿ ಡಿಕ್ಕಿ ಹೊಡೆದು ಸಿಮೆಂಟ್ ಶೀಟ್‌ಗಳು ರಸ್ತೆಯಲ್ಲಿ ಬಿದ್ದಿರುವುದು.
- ಬರಗೂರು ಬಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಸಿಮೆಂಟ್ ಶೀಟ್‌ಗಳು
- ಚಾಲಕ ಪರಾರಿ
ಅರಕಲಗೂಡು: ತಾಲೂಕಿನ ಬರಗೂರು ಗ್ರಾಮದಲ್ಲಿ ಶನಿವಾರ ರಾತ್ರಿ ಡಿವೈಡರ್‌ಗೆ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅರಕಲಗೂಡು ಕಡೆಯಿಂದ ರಾಮನಾಥಪುರಕ್ಕೆ ಸಿಮೆಂಟ್ ಶೀಟ್‌ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಬರುಗೂರು ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ಉರುಳಿದ ರಭಸಕ್ಕೆ ಸಿಮೆಂಟ್ ಶೀಟ್‌ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದವು. ಪ್ರಾಣಾಪಾಯದಿಂದ ಪಾರಾಗಿರುವ ಲಾರಿ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.