ಝಲ್ಲಾ ಕ್ರಿಕೆಟರ್ಸ್ ಚಾಂಪಿಯನ್
ಸಿದ್ದಾಪುರ: ನೆಲ್ಯಹುದಿಕೇರಿ ನಾಲ್ಕನೇ ವಾರ್ಡ್ ವತಿಯಿಂದ ಆಯೋಜಿಸಿದ್ದ ಲಕ್ಕಿ ಇಲೆವನ್ ಪ್ರೀಮಿಯರ್ ಲೀಗ್-2 ಕ್ರಿಕೆಟ್ ಪಂದ್ಯಾವಳಿಯಲ್ಲಿ ಝಲ್ಲಾ ಕ್ರಿಕೆಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಬೌಂಡರಿ ಬ್ಲಾಸ್ಟರ್ ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿತು.
ವೈಯಕ್ತಿಕ ಪ್ರಶಸ್ತಿಗಳಲ್ಲಿ ಝಲ್ಲಾ ತಂಡದ ನಿಖಿಲ್ ದಾಸ್ ಮ್ಯಾನ್ ಆಫ್ ದ ಸೀರಿಸ್, ಬೆಸ್ಟ್ ಬ್ಯಾಟ್ಸ್‌ಮ್ಯಾನ್ ಹಾಗೂ ಫೈನಲ್ ಪಂದ್ಯದಲ್ಲಿ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿಗಳನ್ನು ಪಡೆದು ಗಮನ ಸೆಳೆದರು. ಬೆಸ್ಟ್ ಬೌಲರ್ ಪ್ರಶಸ್ತಿಯನ್ನು 46 ತಂಡದ ಮುಬಾರಕ್ ಪಡೆದರು.
ಮಹಿಳೆಯರಿಗಾಗಿ ಹಗ್ಗ ಜಗ್ಗಾಟ, ಭಾರದ ಗುಂಡು ಎಸೆತ, ಥ್ರೋ ಬಾಲ್ ಸೇರಿದಂತೆ ವಿವಿಧ ಸ್ಪರ್ಧೆಗಳು ಹಾಗೂ ಮಕ್ಕಳಿಗೆ ವಿಶೇಷ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಹಿರಿಯ ನಾಗರಿಕರಿಗೆ ಲೆಜೆಂಡ್ ಕ್ರಿಕೆಟ್ ಲೀಗ್ ಪಂದ್ಯಾವಳಿ ಆಯೋಜಿಸಿದ್ದು ಲಕ್ಕಿ ಇಲೆವನ್ ರೆಡ್ ತಂಡ ಪ್ರಥಮ ಬಹುಮಾನ ಪಡೆಯಿತು. ಫೈನಲ್ ಪಂದ್ಯದಲ್ಲಿ ಡೊಮಿನೋಸ್ ಸಂಘದ ಶೌಕತ್ ಮ್ಯಾನ್ ಆಫ್ ದ ಮ್ಯಾಚ್ ಪ್ರಶಸ್ತಿ ಪಡೆದುಕೊಂಡರು.
ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಸಿಪಿಐಎಂ ಶಾಖಾ ಕಾರ್ಯದರ್ಶಿ ಪಿ.ಆರ್.ಭರತ್, ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಧನಲಕ್ಷ್ಮೀ, ಮಾಜಿ ಅಧ್ಯಕ್ಷ ಹಕ್ಕಿಂ, ಮಾಜಿ ಸದಸ್ಯ ಸಪೀಯ, ಸುವೈದ ಅಶ್ರಫ್, ದೇವಸಿ ಟಿ.ಪಿ., ಲಿಂಬ್ರ ಫಾಸಿಲ್, ಕೆ.ಎಂ.ಬಶೀರ್, ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫ ಪಿ.ಕೆ., ಡೊಮಿನೋಸ್ ಸಂಘದ ಶೌಕತ್, ಲಕ್ಕಿ ಇಲೆವನ್ ಸದಸ್ಯರಾದ ನಿಖಿಲ್, ಮುಸ್ತಫ, ರಫೀಕ್, ಅಪ್ಸಲ್, ಉದಯ ಹಾಜರಿದ್ದರು.