ಕೂಡಿಗೆ ಶ್ರೀ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲೇರಿಯಾ ವಿರೋಧ ಮಾಸಾಚಾರಣೆ ಕಾರ್ಯಕ್ರಮ ನಡೆಸಲಾಯಿತು. ಭಾರತಿ, ಹೆಚ್.ಬಿ. ದಿನೇಶಾಚಾರಿ, ಮೀನಾ, ವಿಶ್ವಜ್ಞ, ಚಂದ್ರೇಶ್ ಮತ್ತಿತರರು ಇದ್ದರು.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಕೂಡಿಗೆ ಶ್ರೀ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ಮಲೇರಿಯಾ ವಿರೋಧ ಮಾಸಾಚಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮಲೇರಿಯಾ ವಿರೋಧ ಮಾಸಾಚರಣೆಯ ಮಹತ್ವ, ರೋಗ ಲಕ್ಷಣಗಳು, ಚಿಕಿತ್ಸಾ ವಿಧಾನಗಳ ಬಗ್ಗೆ ಈ ಸಂದರ್ಭ ಸಂಪೂರ್ಣವಾದ ಮಾಹಿತಿ ನೀಡಲಾಯಿತು.
ಡೆಂಗ್ಯೂ ಜ್ವರ, ಡೆಂಗ್ಯೂ ಜ್ವರದ ಲಕ್ಷಣಗಳು, ಚಿಕಿತ್ಸಾ ವಿಧಾನಗಳ ಬಗ್ಗೆಯೂ ಮಾಹಿತಿ ಕೊಡಲಾಯಿತು. ಹೆಚ್‌ಪಿವಿ ವ್ಯಾಕ್ಸಿನೇಷನ್ ಮಹತ್ವದ ಬಗ್ಗೆ ತಿಳಿಸಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳುವಂತೆ ಮನವೊಲಿಸಲಾಯಿತು. ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳು, 100 ಡೇಸ್ ಟಿಬಿ ಕ್ಯಾಂಪೇನ್, ನಶಮುಕ್ತ ಭಾರತ ಅಭಿಯಾನದ ಮಹತ್ವ ಹಾಗೂ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಲಾಯಿತು.
ಪ್ರಾಂಶುಪಾಲೆ ಭಾರತಿ, ಸಹ ಶಿಕ್ಷಕರಾದ ಹೆಚ್.ಬಿ. ದಿನೇಶಾಚಾರಿ , ಶಾಲಾ ಆರೋಗ್ಯ ಅಧಿಕಾರಿ ಮೀನಾ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞ, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಶ್ ಮತ್ತು ವಿದ್ಯಾರ್ಥಿಗಳು ಇದ್ದರು.