ಉಲುಗುಲಿ ಪನ್ಯ ಗ್ರಾಮದ ಗ್ರಾಮ ದೇವತೆ ಬೆಳ್ಳಾರಿಕ್ಕಮ್ಮ ದೇವರ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. 
ಕೊಡಗು

ಮಳೂರು ಬೆಳ್ಳಾರಿಕ್ಕಮ್ಮ ದೇವಿ ವಾರ್ಷಿಕೋತ್ಸವ ಸಂಪನ್ನ

ಪ್ರಮುಖ ಮುಖ್ಯಾಂಶಗಳು

  • ಸುಂಟಿಕೊಪ್ಪ ಪನ್ಯ ಗ್ರಾಮ
  • ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಿಯ ವಾರ್ಷಿಕೋತ್ಸ
ಸುಂಟಿಕೊಪ್ಪ: ಸುಂಟಿಕೊಪ್ಪ ಪನ್ಯ ಗ್ರಾಮದಲ್ಲಿ ನೆಲೆನಿಂತಿರುವ ಗ್ರಾಮ ದೇವತೆ ಶ್ರೀ ಮಳೂರು ಬೆಳ್ಳಾರಿಕ್ಕಮ್ಮ ದೇವಿಯ ವಾರ್ಷಿಕೋತ್ಸವ ಅಂಗವಾಗಿ ನಡೆದ ಎತ್ತು ಪೋರಾಟ್, ಚೌರಿಕುಣಿತ, ದೇವರ ಉತ್ಸವ ಮೂರ್ತಿಯ ನೃತ್ಯ ಬಲಿ ಹಾಗೂ ವಿಶೇಷ ಪೂಜಾ ಕೈಂಕರ್ಯ ಭಕ್ತರ ಸಮುಖದಲ್ಲಿ ಸಂಪನ್ನಗೊಂಡಿತು.
ಉತ್ಸವದ ಅಂಗವಾಗಿ 7 ದಿನಗಳ ಕಾಲ ಸುಂಟಿಕೊಪ್ಪ, ಉಲುಗುಲಿ, ಆಂಜನಗೇರಿ ಬೇಟಗೇರಿ, ಹರದೂರು ಗ್ರಾಮಸ್ಥರು ದೇವಾಲಯದ ವೃತದಲ್ಲಿದ್ದು ವಾಡಿಕೆಯಂತೆ ವಾರದ ನಂತರ ಪುರುಷರು ದೇವಾಲಯ ಆವರಣದಲ್ಲಿ ರಾತ್ರಿ ವೇಳೆ ತಂಗುವ ಮೂಲಕ ದೇವಾಲಯದಲ್ಲಿ ಚೌರಿಕುಣಿತ ನಡೆಸುವ ಮೂಲಕ ದೇವಿಗೆ ಪೂಜೆ ಸಲ್ಲಿಸಿದರು.
ಕೊನೆಯ ದಿನವಾದ ಸೋಮವಾರ ಕೊಡವ ಮತ್ತು ಗೌಡ ಮನೆ ತನದ ಪುರುಷರು ಮತ್ತು ಯುವಕರು ಕುಪ್ಯ್ಪಚಾಲೆ ಮತ್ತು ಗೌಡ ಜನಾಂಗದ ಕುಪ್ಪಸ ದಟ್ಟಿ ಬಿಳಿಉಡುಪು ಧರಿಸಿ ದೇವಾಲಯದ ಭಂಡಾರವನ್ನು ಗ್ರಾಮದ ಮಂದನ ರಮೇಶ್ ಅವರ ಮನೆಯಿಂದ ಎತ್ತಿನ ಮೇಲೆ ಇರಿಸುವ ಮೂಲಕ ವಾದ್ಯಗೋಷ್ಠಿಯೊಂದಿಗೆ ದೇವಾಲಯಕ್ಕೆ ಮೆರವಣಿಗೆಯೊಂದಿಗೆ ತಂದರು. ನಂತರ ದೇವಾಲಯದಲ್ಲಿ ಭಂಡಾರವನ್ನು ಸಮರ್ಪಿಸಿ ಗ್ರಾಮದ ಜನತೆಯಿಂದ ಈಡುಗಾಯಿ ಎತ್ತು ಪೋರಾಟ್, ಚೌರಿಕುಣಿತದ ನಂತರ ಬೆಳ್ಳಾರಿಕ್ಕಮ್ಮ ಉತ್ಸವ ಮೂರ್ತಿಯನ್ನು ದೇವಸ್ಥಾನ ಸುತ್ತ ಪ್ರದಕ್ಷಿಣೆ ನಡೆಸಿಮಹಾಮಂಗಳಾರತಿ ಮಾಡಿ ಪ್ರಸಾದ ವಿತರಣೆ ಮಾಡಿದರು.
ದಿನದ ಪೂಜಾ ಕೈಂಕರ್ಯವನ್ನು ಅರ್ಚಕರಾದ ಗಣೇಶ್ ಶರ್ಮ, ಮಂಜುನಾಥ ಉಡುಪ, ವೆಂಕಟರಮಣ ಭಟ್ ನೆರವೇರಿಸಿದರು. ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಗ್ರಾಮದ ಜನರು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.
ಚಿತ್ರ 01: