ಸೇವೆಯಿಂದ ನಿವೃತ್ತಿ ಹೊಂದಿದ ಮಾದಾಪುರ ಸರ್ಕಾರಿ ಪ್ರೌಢಶಾಲೆ ಪಾಲಾಕ್ಷ ಹಾಗೂ ಅವರ ಪತ್ನಿ ಪಲ್ಲವಿ ಅವರನ್ನು ಸನ್ಮಾನಿಸಲಾಯಿತು. ಸಿ.ಜಿ.ಮಂದಪ್ಪ, ಸೋಮಯ್ಯ, ರತ್ನಕುಮಾರ್, ಯಶವಂತಕುಮಾರ್, ಆರ್.ಟಿ.ಅಂಟರದಾನಿ, ಮಾರಪ್ಪ, ಬಸವರಾಜ್ ಇದ್ದರು.
- ಮಾದಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಪಾಲಾಕ್ಷ
- ಮಾದಾಪುರ ಡಿ.ಚನ್ನಮ್ಮ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಿ.ಜಿ.ಮಂದಪ್ಪ
ಸೋಮವಾರಪೇಟೆ: ಸೇವೆಯಿಂದ ನಿವೃತ್ತಿ ಹೊಂದಿದ ತಾಲೂಕಿನ ಮಾದಾಪುರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಪಾಲಾಕ್ಷ ಅವರಿಗೆ ಶಾಲೆ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಇತ್ತೀಚೆಗೆ ಬೀಳ್ಕೊಡುಗೆ ನೀಡಲಾಯಿತು.
ಮಾದಾಪುರ ಡಿ.ಚನ್ನಮ್ಮ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಿ.ಜಿ.ಮಂದಪ್ಪ ಮಾತನಾಡಿ, ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಾಗಿದ್ದು, ಶಿಕ್ಷಕರು ಪ್ರಾಮಾಣಿಕವಾಗಿ ಉತ್ತಮ ಸೇವೆ ಸಲ್ಲಿಸಿದಾಗ ಸಮಾಜ ಗೌರವಿಸುತ್ತದೆ ಎಂದರು.
ಪಾಲಾಕ್ಷ ಹಾಗೂ ಪತ್ನಿ ಪಲ್ಲವಿ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಯ್ಯ, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್, ನಿರ್ದೇಶಕ ಯಶವಂತಕುಮಾರ್, ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಚ್.ಬಿ.ತಳವಾರ್ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷ ಮಾದಪ್ಪ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿ.ಸಿ.ಡೈಸಿ, ನಿವೃತ್ತ ಮುಖ್ಯ ಶಿಕ್ಷಕರಾದ ಟಿ.ಜಿ.ಪ್ರೇಮಕುಮಾರ್, ಬಸವರಾಜ್, ಚಂದ್ರಚಾರ್, ಗಣಪತಿ, ಸಿಆರ್‌ಪಿ ಟಿ.ಈ.ಮಂಜುನಾಥ್ ಮತ್ತಿತರರು ಇದ್ದರು.