ಅಖಿಲ ಭಾರತ ನಾಗರಿಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡ ಸೋಮವಾರಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ನವಪ್ರೀತ್ ಕೌರ್ ಅವರಿಂದ ಬಹುಮಾನ ಸ್ವೀಕರಿಸಿದರು. ವಿವಿಧ ಸ್ಪರ್ಧೆ ವಿಜೇತರು ಈ ಸಂದರ್ಭ ಇದ್ದರು.
ನವದೆಹಲಿಯಲ್ಲಿ ಈಚೆಗೆ ನಡೆದ ಅಖಿಲ ಭಾರತ ನಾಗರಿಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಬೆಳ್ಳಿ ಪದಕ ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯ ಮಾರ್ಗದರ್ಶನದಲ್ಲಿ ಮಿಲನಾ ನೃತ್ಯ ಪ್ರದರ್ಶನ ನೀಡಿದ್ದರು.