ಕಾಂಗ್ರೆಸ್‌ಅಲ್ಪಸಂಖ್ಯಾತರ ಕುಶಾಲನಗರ ನಗರ ಘಟಕದ ನೂತನ ಅಧ್ಯಕ್ಷ ಎಂ.ಜೆ. ಇರ್ಫಾನ್.
- ಕಾಂಗ್ರೆಸ್ ಅಲ್ಪಸಂಖ್ಯಾತರ ಕುಶಾಲನಗರ ಘಟಕ
- ಬ್ಲಾಕ್ ಕಾಂಗ್ರೆಸ್ ಕಚೇರಿ
ಕುಶಾಲನಗರ: ಕಾಂಗ್ರೆಸ್ ಅಲ್ಪಸಂಖ್ಯಾತರ ಕುಶಾಲನಗರ ಘಟಕದ ಅಧ್ಯಕ್ಷರಾಗಿ ಎಂ.ಜೆ.ಇರ್ಫಾನ್ ಅಧಿಕಾರ ಸ್ವೀಕರಿಸಿದರು.
ಇಲ್ಲಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತ ಘಟಕದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಇರ್ಫಾನ್ ಅವರಿಗೆ ಅಧಿಕಾರ ವಹಿಸಲಾಯಿತು. ನಂತರ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಮುಂಬರುವ ಪುರಸಭೆ ಚುನಾವಣೆಯಲ್ಲಿ ಕನಿಷ್ಠ 5 ಅಲ್ಪಸಂಖ್ಯಾತರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸಬೇಕು. ಚುನಾವಣೆ ಬಳಿಕ ಇಬ್ಬರನ್ನು ನಾಮನಿರ್ದೇಶನ ಮಾಡಲು ಕೋರಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅಲ್ಪಸಂಖ್ಯಾತರ ಘಟಕ ಕುಶಾಲನಗರ ಬ್ಲಾಕ್ ಅಧ್ಯಕ್ಷ ಅಬ್ದುಲ್ ರಜಾಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಕುಡಾ ಸದಸ್ಯ ಸಜಿ, ಬ್ಲಾಕ್ ಉಪಾಧ್ಯಕ್ಷ ಶಾಂತಪ್ಪ ಅಂಥೋಣಿ, ಕಾರ್ಯದರ್ಶಿ ಮಜೀದ್, ಜಿಲ್ಲಾ ಸಮಿತಿ ಸದಸ್ಯ ಆಶ್ರಫ್, ಡಿಸಿಸಿ ಸದಸ್ಯ ಶೇಖರ್, ಬೀದಿಬದಿ ವ್ಯಾಪಾರಿಗಳ ಘಟಕದ ಅಧ್ಯಕ್ಷ ಆದಂ ಮತ್ತಿತರರು ಉಪಸ್ಥಿತರಿದ್ದರು.