ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು. ಇಸ್ಮಾಯಿಲ್, ತೆನ್ನಿರ ಮೈನಾ, ಕಮಲಾ ಉತ್ತಯ್ಯ ಇತರರಿದ್ದರು.
- ಬೆಟ್ಟಗೇರಿಯಲ್ಲಿ ಶಾಸಕರಿಂದ ರಸ್ತೆ ಕಾಮಗಾರಿಗೆ ಚಾಲನೆ
ಮಡಿಕೇರಿ: ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು.
ನಂತರ ಮಾತನಾಡಿ, ಕೆಆರ್‌ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೪೦ ಕೋಟಿ ವೆಚ್ಚದಲ್ಲಿ ಒಟ್ಟು ೨೫೨ ಕಾಮಗಾರಿಗಳನ್ನು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಲಾಗಿದೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ. ಸಾರ್ವಜನಿಕರಿಂದ ಮತ್ತ?್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂಧರ್ಭದಲ್ಲಿ ಪ್ರಮುಖರಾದ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಕೊಡಗನ ತೀರ್ಥ ಪ್ರಸಾದ್, ಹನೀಫ್, ಬೆಟ್ಟಗೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚಳಿಯಂಡ ಕಮಲಾ ಉತ್ತಯ್ಯ, ಮುಂಜಾಂದಿರ ಚಿಕ್ಕು ಕಾರ್ಯಪ್ಪ, ಕೇಟೋಳಿ ಮೋಹನ್ ರಾಜ್, ಅಪ್ರು ರವೀಂದ್ರ, ಹೊಸೂರು ಸೂರಜ್, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.