- ಜಿಲ್ಲೆಯ ಹಲವೆಡೆ ಸಾಧಾರಣ ಮಳೆ
ಮಡಿಕೇರಿ: ಜಿಲ್ಲೆಯ ಹಲವೆಡೆ ಸೋಮವಾರ ಸಾಧಾರಣ ಮಳೆ ಆಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ದಿನಪೂರ್ತಿ ಮಳೆಯ ವಾತಾವರಣ ಇತ್ತು.
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 1.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.59 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 315.13 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1403.77 ಮಿ.ಮೀ ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ 2.80 ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ 1 ಮಿ.ಮೀ., ಕುಶಾಲನಗರ ತಾಲೂಕಿನಲ್ಲಿ 3.10 ಮಿ.ಮೀ. ಸರಾಸರಿ ಮಳೆಯಾಗಿದೆ. ನಾಪೋಕ್ಲು 2.80, ಭಾಗಮಂಡಲ 19.60, ಅಮ್ಮತ್ತಿ 4, ಪೊನ್ನಂಪೇಟೆ 1, ಬಾಳೆಲೆ 3.01, ಸೋಮವಾರಪೇಟೆ 1.80, ಶಾಂತಳ್ಳಿ 5, ಕೊಡ್ಲಿಪೇಟೆ 5.60, ಕುಶಾಲನಗರ 1.20, ಸುಂಟಿಕೊಪ್ಪ ಹೋಬಳಿಯಲ್ಲಿ 05 ಮಿ.ಮೀ. ಮಳೆಯಾಗಿದೆ.
2,859 ಅಡಿ ಎತ್ತರದ ಹಾರಂಗಿ ಅಣೆಕಟ್ಟೆಯಲ್ಲಿ ಸೋಮವಾರದ ಮಾಹಿತಿ ಪ್ರಕಾರ 2826.83 ಅಡಿ ನೀರಿದೆ. ಕಳೆದ ವರ್ಷ ಇದೇ ದಿನ 2850.83 ಅಡಿ ನೀರಿತ್ತು. ನದಿಗೆ 180 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.