ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದ ಹನ್ಸಿಕಾ. ಶಿಕ್ಷಕರಾದ ನಿಂಗರಾಜು, ಮಮತಾ ಇದ್ದರು. 
ಕೊಡಗು

ಭಕ್ತಿಗೀತೆ ಸ್ಪರ್ಧೆಯಲ್ಲಿ ಎನ್.ಹನ್ಸಿಕಾ ಪ್ರಥಮ

ಪೊನ್ನಂಪೇಟೆ: ಕುಶಾಲನಗರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪದ ಲಯನ್ಸ್ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಎನ್.ಹನ್ಸಿಕಾ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಈಕೆ ಗೋಣಿಕೊಪ್ಪ ಕೆಪಿಎಸ್ ಪ್ರಾಥಮಿಕ ಶಾಲೆಯ ಶಿಕ್ಷಕರಾದ ನಿಂಗರಾಜು ಹಾಗೂ ಗೋಣಿಕೊಪ್ಪ ಲಯನ್ಸ್ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಮತಾ ಅವರ ಪುತ್ರಿ.