ನಾಗಪ್ಪ ಯಾಲಕ್ಕಿಕಟ್ಟೆ 
ಕೊಡಗು

ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾಗಪ್ಪ ಆಯ್ಕೆ

ಮಡಿಕೇರಿ:
ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕೊಡಗು ಘಟಕದ ಅಧ್ಯಕ್ಷರಾಗಿ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ನಾಗಪ್ಪ ಯಾಲಕ್ಕಿಕಟ್ಟೆ ಆಯ್ಕೆ ಆಗಿದ್ದಾರೆ. ಈಚೆಗೆ ನಡೆದ ಚುನಾವಣೆಯಲ್ಲಿ 5 ವರ್ಷಗಳ ಅವಧಿಗೆ ಈ ಆಯ್ಕೆ ನಡೆದಿದ್ದು ಉಪಾಧ್ಯಕ್ಷರಾಗಿ ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೂಪಾ, ಪ್ರಧಾನ ಕಾರ್ಯದರ್ಶಿಯಾಗಿ ಐಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಹೆಚ್.ಕೆ. ಉಮೇಶ್ ಕುಮಾರ್, ಕಾರ್ಯಾಧ್ಯಕ್ಷರಾಗಿ ಶನಿವಾರಸಂತೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಿ.ಟಿ. ಸೋಮಶೇಖರ್, ಖಜಾಂಚಿಯಾಗಿ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ನಾಗೇಶ್, ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಇದೇ ಕಾಲೇಜಿನ ಟಿ.ಡಿ. ರಾಜು, ಕಾರ್ಯದರ್ಶಿಯಾಗಿ, ವಿರಾಜಪೇಟೆ ಸೆಂಟ್ ಅಯನ್ಸ್ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿವೇಕ್, ಜಂಟಿ ಕಾರ್ಯದರ್ಶಿಯಾಗಿ ಮಾದಾಪುರ ಡಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಕೆ.ವಿ. ರಾಜು ಸುಂದರA, ಸಂಚಾಲಕರಾಗಿ ತಿತಿಮತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿನೋದ್ ಕುಮಾರ್ ಆಯ್ಕೆ ಆಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.