ಬೇಟೋಳಿ ಗ್ರಾಮದಲ್ಲಿರುವ ರಾಮನಗರ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ತಂಬಿಲ ಸೇವೆ ನೆರವೇರಿತು. 
ಕೊಡಗು

ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ನಾಗರ ಪಂಚಮಿ

ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದಲ್ಲಿರುವ ರಾಮನಗರ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ, ಶ್ರಿಗಣಪತಿ, ಶ್ರೀ ವನದುರ್ಗೆ ದೇವರಿಗೆ ಪೂಜೆ ಸಲ್ಲಿಸಿದ ನಂತರ ಶ್ರೀ ನಾಗನ ಗುಡಿಯಲ್ಲಿ ಹಾಲಿನ ಅಭಿಷೇಕ, ಸಿಯಾಳದ ಅಭಿಷೇಕ, ಪುಷ್ಪಾರ್ಚನೆ, ಕುಂಕುಮಾರ್ಚನೆ ನೆರವೇರಿಸಲಾಯಿತು. ಭಕ್ತಾದಿಗಳು ನಾಗತಂಬಿಲ ಹಾಗೂ ನಾಗಪೂಜೆ ಸಲ್ಲಿಸಿದರು. ನೈವೇದ್ಯ ಅರ್ಪಣೆಯು ಜರುಗಿತು. ನಂತರ ಭಕ್ತರಿಗೆ ಅನ್ನ ಸಂತರ್ಪಣೆ ಜರುಗಿತು. ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನ ಮೂರ್ತಿ ಭಟ್ ನೆರವೇರಿಸಿದರು.