ನಾಪೋಕ್ಲು ಸಮೀಪದ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು. 
ಕೊಡಗು

ಗಣಿತ ಪ್ರತಿಭಾ ಪರೀಕ್ಷೆ ವಿದ್ಯಾರ್ಥಿಗಳ ಸಾಧನೆ

ನಾಪೋಕ್ಲು: ಇಲ್ಲಿಗೆ ಸಮೀಪದ ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆ ಆಯೋಜಿಸಲಾಗಿತ್ತು.
ಈ ಪರೀಕ್ಷೆಯಲ್ಲಿ ಶ್ರೀರಾಜರಾಜೇಶ್ವರಿ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 40 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಬಿ.ಜೆ.ಡಿಂಪನಾ, 7ನೇ ತರಗತಿ ವಿದ್ಯಾರ್ಥಿ ಎಂ.ಎಸ್.ದುಶ್ಯಂತ್ ರಾಜ್ಯಮಟ್ಟದಲ್ಲಿ ಐದನೇ ಸ್ಥಾನ ಹಾಗೂ 6ನೇ ತರಗತಿ ವಿದ್ಯಾರ್ಥಿ ವರ್ಧನ್ ತಾಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
40 ವಿದ್ಯಾರ್ಥಿಗಳು ಉತ್ತೀರ್ಣ: ಚೇರಂಬಾಣೆ ಶ್ರೀರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಒಟ್ಟು 40 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಸಾಧನೆ: ಚೇರಂಬಾಣೆ ಶ್ರೀರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪುಟಾಣಿ ವಿಜ್ಞಾನ ಬಳಗದ ವತಿಯಿಂದ ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗದಿಂದ 67 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
5ನೇ ತರಗತಿ ವಿದ್ಯಾರ್ಥಿಗಳಾದ ಕೆ.ಬಿ.ಯಶಸ್ ಮಂದಣ್ಣ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ, ಎಂ.ಎನ್.ರಶ್ವಿನ್ ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಹಾಗೂ 4ನೇ ತರಗತಿ ವಿದ್ಯಾರ್ಥಿ ಬಿ.ಎಂ.ತನ್ಮಯ್ ಜಿಲ್ಲಾಮಟ್ಟದಲ್ಲಿ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ. ಶ್ರೀ ರಾಜರಾಜೇಶ್ವರಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗದಿಂದ ಒಟ್ಟು 67 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ವಿಭಾಗ: ಶ್ರೀರಾಜರಾಜೇಶ್ವರಿ ಶಾಲೆಯ ಪ್ರೌಢಶಾಲಾ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
8ನೇ ತರಗತಿ ವಿದ್ಯಾರ್ಥಿನಿ ಜಿಶ್ಮಿತಾ ಬಿ.ಜಿ.ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ಸಿ.ವಿ.ಹಾಸಿನಿ ರಾಷ್ಟ್ರ ಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ 9ನೇ ತರಗತಿ ವಿದ್ಯಾರ್ಥಿ ಬಿ.ಎಚ್.ತ್ರಿಶೂಲ್ ತಿಮ್ಮಯ್ಯ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ಎಂ.ಆರ್.ದಕ್ಷ ಜಿಲ್ಲಾಮಟ್ಟದಲ್ಲಿ ನಾಲ್ಕನೇ ಸ್ಥಾನ, 10ನೇ ತರಗತಿ ವಿದ್ಯಾರ್ಥಿನಿ ಎಂ.ಪಿ.ನೀಮಾ ಜಿಲ್ಲಾ ಮಟ್ಟದಲ್ಲಿ 5ನೇ ಸ್ಥಾನ, 8ನೇ ತರಗತಿ ವಿದ್ಯಾರ್ಥಿನಿ ಡಿ.ಸಿ.ಖುಷಿ ತಾಲೂಕು ಮಟ್ಟದಲ್ಲಿ ನಾಲ್ಕನೇ ಸ್ಥಾನ ಹಾಗೂ ಕೆ.ಆರ್.ಪ್ರೇಕ್ಷಾ ಪೊನ್ನಮ್ಮ ತಾಲೂಕು ಮಟ್ಟದಲ್ಲಿ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪ್ರೌಢಶಾಲಾ ವಿಭಾಗ: ಶ್ರೀರಾಜರಾಜೇಶ್ವರಿ ಶಾಲೆಯ ಪ್ರೌಢಶಾಲಾ ವಿಭಾಗದಿಂದ ಒಟ್ಟು 50 ವಿದ್ಯಾರ್ಥಿಗಳು ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣಿತ ಶಿಕ್ಷಕರಾಗಿರುವ ಯು.ಎಂ.ಅನಿಲ್, ಬೃಂದಾಕವನ್ ಕುದುಪಜೆ ಡಿ.ಎಂ.ರಾಜೇಶ್ವರಿ, ಮುಖ್ಯ ಶಿಕ್ಷಕ ಕವನ್ ಕುದುಪಜೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕೆ ಬಿ.ಸ್ವರೂಪ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.