ನಾಪೋಕ್ಲು ಪಂಚಾಯಿತಿ ಹಾಗೂ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಗ್ರಾಮಾಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಬೀಳ್ಕೊಡಲಾಯಿತು. ವನಜಾಕ್ಷಿ ರೇಣುಕೇಶ್, ಚಂದ್ರಶೇಖರ್, ಚೌರಿರ ಶರತ್ ಮತ್ತಿತರರಿದ್ದರು. 
ಕೊಡಗು

ಎಮ್ಮೆಮಾಡು ಗ್ರಾಮಾಭಿವೃದ್ಧಿ ಅಧಿಕಾರಿಗೆ ಬೀಳ್ಕೊಡುಗೆ

ನಾಪೋಕ್ಲು: ನಿವೃತ್ತಿಹೊಂದಿದ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಎಮ್ಮೆಮಾಡು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮಾಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು.
ಚೋಂದಕ್ಕಿ ಅವರು ಏಳು ವರ್ಷಗಳಿಂದ ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಾಭಿವೃದ್ಧಿ ಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನಿವೃತ್ತರಾದರು.
ಅಧ್ಯಕ್ಷತೆಯನ್ನು ನಾಪೋಕ್ಲು ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಬಲಮಾವಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್, ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಂಗಂಡ ಶಶಿ ಮಂದಣ್ಣ ಹಾಗೂ ಸದಸ್ಯರು, ಸಿಬ್ಬಂದಿ, ಎಮ್ಮೆಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂಬರಂಡ ಐಸಮ್ಮ, ಸದಸ್ಯರ ಹಾಗೂ ಸಿಬ್ಬಂದಿ ಹಾಜರಿದ್ದರು.