ನಾಪೋಕ್ಲುವಿನ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ವತಿಯಿಂದ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
- ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಅಭಿಮತ
ನಾಪೋಕ್ಲು: ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲುವಿನಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ನಾಪೋಕ್ಲು ಶೈಕ್ಷಣಿಕವಾಗಿ ಮುಂದುವರಿದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು.
ಇಲ್ಲಿನ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ವತಿಯಿಂದ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹಿಂದೆ ವಿದ್ಯಾರ್ಥಿಗಳಿಗೆ ಅವಕಾಶ ಇರಲಿಲ್ಲ. ಈಗ ವಿಪುಲ ಅವಕಾಶ ಲಭಿಸಿದೆ ಎಂದು ಹೇಳಿದರು.
ನೇತಾಜಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ.ಎಸ್.ಸುರೇಶ್ ಮಾತನಾಡಿದರು. ಶಾಲೆ ಸ್ಥಾಪಕ ಅಧ್ಯಕ್ಷ ಕುಟ್ಟಂಜೆಟ್ಟಿರ ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಕುಟ್ಟಂಜೆಟ್ಟಿರ ಶರತ್, ವಿದ್ಯಾ ಸುರೇಶ್, ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಇದ್ದರು.