ನಾಪೋಕ್ಲು ಕೊಡವ ಸಮಾಜ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. 
ಕೊಡಗು

ರಸ್ತೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ
  • ನಾಪೋಕ್ಲು ಹೋಬಳಿ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕ್ರಮ
ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಇಲ್ಲಿನ ಕೊಡವ ಸಮಾಜ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಹಾಗೂ ಗ್ರಾಮಸ್ಥರು ಹದಗೆಟ್ಟ ರಸ್ತೆ ದುರಸ್ತಿಗೆ ಮನವಿ ಮಾಡಿದ್ದರು. ಇದೀಗ ಪಂಚಾಯತ್ ರಾಜ್ ಇಲಾಖೆ ಮೂಲಕ ಕೊಡವ ಸಮಾಜ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಅಜ್ಜಿಮುಟ್ಟ ಮೂಲಕ ಎಮ್ಮೆಮಾಡು ಸಂಪರ್ಕಿಸುವ ಮೂರೂವರೆ ಕಿಲೋಮೀಟರ್ ರಸ್ತೆಯನ್ನು ಪಂಚಾಯತ್ ರಾಜ್ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು.
ಕಾಂಗ್ರೆಸ್ ವಲಯಾಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಕೊಡವ ಸಮಾಜದ ಉಪಾಧ್ಯಕ್ಷ ಕರವಂಡ ಲವನಾಣಯ್ಯ, ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ನಿಶಾ ಮೇದಪ್ಪ, ಬಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕೆಡಿಪಿ ಸದಸ್ಯರಾದ ಎಂ.ಎಚ್.ಅಬ್ದುಲ್ ರಹಮಾನ್, ಅಕ್ರಮ ಸಕ್ರಮ ಸಮಿತಿ ತಾಲೂಕು ಅಧ್ಯಕ್ಷ ನೆರವಂಡ ಉಮೇಶ್, ಎಂ.ಎ.ಮನ್ಸೂರ್ ಆಲಿ ಇತರರಿದ್ದರು.