ಸೋಮವಾರಪೇಟೆ ತಾಲೂಕಿನ ಕಿರಗಂದೂರು ಗ್ರಾಮದ ಮಕ್ಕಳ ಗುಡಿ ಬೆಟ್ಟದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಭಿವೃದ್ಧಿಗೆ ಅನುದಾನ ಕೊಡಬೇಕೆಂದು ಶಾಸಕ ಡಾ. ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದರು. ಶಿವಕುಮಾರ್, ಚಂಗಪ್ಪ, ಮುತ್ತಣ್ಣ ಇದ್ದರು.  
ಕೊಡಗು

ಮಕ್ಕಳಗುಡಿ ಬೆಟ್ಟದ ಅಭಿವೃದ್ಧಿಗೆ ಅಗತ್ಯ ಕ್ರಮ

ಮಾದೇಶ್ ತಿ.ನರಸೀಪುರ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಮಂತರ್‌ಗೌಡ ಭರವಸೆ
ಸೋಮವಾರಪೇಟೆ: ತಾಲೂಕಿನ ಕಿರಗಂದೂರು ಗ್ರಾಮದ ಮಕ್ಕಳಗುಡಿ ಬೆಟ್ಟದಲ್ಲಿ ಮಕ್ಕಳಗುಡಿ ಬೆಟ್ಟ ಸಂರಕ್ಷಣಾ ಮತ್ತು ಅಭಿವೃದ್ಧಿ ಸಮಿತಿ ಸಭೆ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಶನಿವಾರ ಆಯೋಜಿಸಲಾಗಿತ್ತು.
ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ಪ್ರವಾಸಿ ತಾಣ ಮಕ್ಕಳಗುಡಿ ಬೆಟ್ಟದಲ್ಲಿ ಕೆಲವೊಂದು ಅಭಿವೃದ್ಧಿ ಕೆಲಸಗಳಾಗಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಣಬೇಕು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಉದ್ಯಾನ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಲಾಗುವುದು. ಸಮಿತಿ ಸದಸ್ಯರು ಸಭೆ ಸೇರಿ ಅಭಿವೃದ್ಧಿ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ ಎಂದು ಹೇಳಿದರು.
ಮಕ್ಕಳ ಗುಡಿ ಬೆಟ್ಟದ ಪ್ರದೇಶವನ್ನು ಸರ್ವೇ ಮಾಡಿಸಿ, ಗಡಿ ಗುರುತಿಸುವ ಕೆಲಸ ಮಾಡಿಸಿಕೊಡಲು ಜಿಲ್ಲಾಧಿಕಾರಿಗೆ ತಿಳಿಸಲಾಗುವುದು. ಬೆಟ್ಟದ ಸುತ್ತಲೂ ಸಾಕಷ್ಟು ತ್ಯಾಜ್ಯ ಕಂಡುಬರುತ್ತಿದ್ದು, ಒಂದು ವಾರದಲ್ಲಿ ಸ್ವಚ್ಛ ಮಾಡಿಸುವಂತೆ ಕಿರಗಂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅವರಿಗೆ ಸೂಚಿಸಿದರು.
ತ್ಯಾಜ್ಯ ಸಂಗ್ರಹಿಸಲು ಅಲ್ಲಲ್ಲಿ ತೊಟ್ಟಿಗಳು, ಆಯ್ದ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ತಿಳಿಸಿದರು.
ಐಗೂರು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಬಿ.ಶಿವಕುಮಾರ್ ಮಾತನಾಡಿ, ಮಕ್ಕಳಗುಡಿ ಬೆಟ್ಟ ಸಮುದ್ರಮಟ್ಟದಿಂದ 4 ಸಾವಿರ ಅಡಿ ಎತ್ತರದಲ್ಲಿದ್ದು, ಕಣ್ಣು ಹಾಯಿಸಿದಷ್ಟು ದೂರ ಸುಂದರ ಪರಿಸರವನ್ನು ಕಾಣಬಹುದು. ದಾನಿಗಳ ನೆರವಿನಿಂದ ಆಸನಗಳು, ತ್ಯಾಜ್ಯ ಸಂಗ್ರಹಿಸುವ ತೊಟ್ಟಿಗಳನ್ನು ಅಳವಡಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಮಕ್ಕಳಗುಡಿ ಬೆಟ್ಟದ ಭೂಮಿ ಒತ್ತುವರಿಯಾಗದಂತೆ ಗ್ರಾಮಸ್ಥರು ಒಂದು ಸಮಿತಿಯನ್ನು ಮಾಡಿಕೊಂಡು ಜಾಗವನ್ನು ಉಳಿಸಿಕೊಂಡು ಬರುವ ಕೆಲಸ ಮಾಡಿದ್ದಾರೆ. ಇಲ್ಲಿ ಇನ್ನೂ ಸಾಕಷ್ಟು ಅಭಿವೃದ್ಧಿ ಕೆಲಸವಾಗಬೇಕಿದ್ದು, ಶಾಸಕರು ಮಾಡಿಕೊಡಬೇಕೆಂದು ಮನವಿ ಮಾಡಿದರು.
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ತಾಲೂಕು ಘಟಕದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಸತೀಶ್, ಸೆಸ್ಕ್ ಎಇಇ ವಿನಯ್ ಇದ್ದರು.