ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜತೆ ಚರ್ಚೆ ನಡೆಸಿದರು. 
ಕೊಡಗು

ಕೊಡಗಿನ ಮೂಲಕ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ

ಮಡಿಕೇರಿ:
ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿ ಮಾಡಿದ ನಂತರ ಈ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ವಿವಿಧ ರೈಲ್ವೇ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಈ ಸಂದರ್ಭ ಚರ್ಚೆ ನಡೆಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ ಕೆಲವು ವರದಿಗಳು ಮತ್ತು ಚರ್ಚೆಗಳು ಕೊಡಗಿನ ಮೂಲಕ ರೈಲು ಮಾರ್ಗ ಹಾದುಹೋಗುವ ಸಾಧ್ಯತೆಯ ಬಗ್ಗೆ ಸಾರ್ವಜನಿಕರ ಒಂದು ವಲಯದಲ್ಲಿ ಆತಂಕ ಉಂಟುಮಾಡಿವೆ. ಆದರೆ, ರೈಲ್ವೇ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಇಂತಹ ಯಾವುದೇ ಪ್ರಸ್ತಾವನೆ ಪ್ರಸ್ತುತ ಸಚಿವಾಲಯದ ಪರಿಗಣನೆಯಲ್ಲಿಲ್ಲ ಎಂಬುದು ದೃಢಪಟ್ಟಿದೆ. ಪ್ರದೇಶಕ್ಕೆ ಸಂಬAಧಿಸಿದ ಯಾವುದೇ ಭವಿಷ್ಯದ ಮೂಲಸೌಕರ್ಯ ಯೋಜನೆಯನ್ನು ಕೈಗೊಳ್ಳುವ ಮೊದಲು ಎಲ್ಲಾ ಹಿತಾಸಕ್ತಿ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಹಾಗೂ ಜಿಲ್ಲೆಯ ಪರಿಸರ, ಪರಿಸ್ಥಿತಿ ಮತ್ತು ಅಭಿವೃದ್ಧಿ ಸಂಬAಧಿತ ಹಿತಾಸಕ್ತಿಗಳನ್ನು ಪರಿಗಣಿಸಲಾಗುವುದು.
ಕೊಡಗಿನ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸುವುದರ ಜತೆಗೆ ಅದರ ವಿಶಿಷ್ಟ ಪರಿಸರ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ ಯದುವೀರ್ ಪ್ರದೇಶದ ಹಿತಕ್ಕಾಗಿ ಉತ್ತಮ ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬAಧಿಸಿದ ವಿಷಯಗಳಲ್ಲಿ ರೈಲ್ವೇ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುವುದಾಗಿ ಭರವಸೆ ನೀಡಿದರು. ಊಹಾಪೋಹಗಳ ಆಧಾರದ ಮೇಲಿನ ವರದಿಗಳಿಂದ ಸಾರ್ವಜನಿಕರು ದಾರಿ ತಪ್ಪಬಾರದು. ಈ ವಿಷಯಕ್ಕೆ ಸಂಬAಧಿಸಿದ ಯಾವುದೇ ಅಧಿಕೃತ ಬೆಳವಣಿಗೆಯನ್ನು ಸೂಕ್ತ ಮಾರ್ಗಗಳ ಮೂಲಕ ಪಾರದರ್ಶಕವಾಗಿ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.