ಮಡಿಕೇರಿ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿಆಯೋಜಿಸಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಉಪನ್ಯಾಸಕ ನಂದಕುಮಾರ್ ಮಾತನಾಡಿದರು. ಜನಜಾಗೃತಿ ವೇದಿಕೆ ಸದಸ್ಯ ಟಿ.ಎಂ.ಅಯ್ಯಪ್ಪ, ಸೇವಾಪ್ರತಿನಿಧಿ ಪ್ರೇಮಾ, ಪ್ರಾಂಶುಪಾಲ ಜಾಯ್ಸ ವಿನಯ ಮತ್ತು ಶಿಕ್ಷಕರು ಹಾಜರಿದ್ದರು.
ನಾಪೋಕ್ಲು: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಉಪನ್ಯಾಸಕ ಪಿ.ಪಿ. ನಂದಕುಮಾರ್ ಹೇಳಿದರು.
ಮಡಿಕೇರಿಯ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಘಟಕ ಸಂಯುಕ್ತವಾಗಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಹದಿ ಹರೆಯದಲ್ಲಿ ಅಂಟಿಕೊಳ್ಳುವ ದುಶ್ಚಟಗಳಿಂದ ಜೀವನವೇ ಹಾಳಾಗುತ್ತದೆ. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸಾಧನೆ ಮಾಡುವತ್ತ ಮುಂದಾಗಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜನಜಾಗೃತಿ ವೇದಿಕೆ ಸದಸ್ಯ ಟಿ.ಎಂ.ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ವ್ಯಸನಮುಕ್ತರಾಗಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು. ಗುರು, ಹಿರಿಯರನ್ನು ಅನುಸರಿಸಬೇಕು. ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಲೀಲಾ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯತ್ತ ಗಮನಹರಿಸಬೇಕು. ನಾಡಿನ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವಿನೋದಾ, ಸೇವಾಪ್ರತಿನಿಧಿ ಪ್ರೇಮಾ, ಪ್ರಾಂಶುಪಾಲ ಜಾಯ್ಸ ವಿನಯ ಮತ್ತು ಶಿಕ್ಷಕರು ಹಾಜರಿದ್ದರು.