ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಉದ್ಘಾಟಿಸಿದರು. ಎಚ್.ಪಿ.ನಿರ್ಮಲಾ, ಬಿ.ಪಿ.ಗೀತಾಂಜಲಿ, ಟಿ.ಬಿ.ಕುಮಾರ ಸ್ವಾಮಿ, ಡಾ.ಎಚ್.ಎಸ್.ವೇಣುಗೋಪಾಲ್ ಇದ್ದರು. 
ಕೊಡಗು

ಹಾಕತ್ತೂರಲ್ಲಿ ಎನ್‌ಎಸ್‌ಎಸ್ ಶಿಬಿರ

ಲಲಾಟಾಕ್ಷ ಎಸ್
ನಾಪೋಕ್ಲು: ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮೇ 4ರವರೆಗೆ ಹಮ್ಮಿಕೊಳ್ಳಲಾಗಿದೆ.
ಏ.28ರಂದು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರದ ಔಚಿತ್ಯ, ಪ್ರಾಮುಖ್ಯತೆ ಬಗ್ಗೆ ತಿಳಿಸಿಕೊಟ್ಟರು.
ಶಿಬಿರದ ಅಧ್ಯಕ್ಷ ವಹಿಸಿದ್ದ ಎಚ್.ಪಿ.ನಿರ್ಮಲಾ ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯ, ಉದ್ದೇಶ ಮತ್ತು ಸಂಕಲ್ಪವನ್ನು ತಿಳಿಸಿದರು.
ಹಾಕತ್ತೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಪಿ.ಗೀತಾಂಜಲಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರಗಳು ಪಂಚಾಯಿತಿ ಕಾರ್ಯಗಳಿಗೆ ಬಲ ತುಂಬುತ್ತವೆ ಎಂದು ಹೇಳಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಟಿ.ಬಿ.ಕುಮಾರ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿ ಡಾ.ಎಚ್.ಎಸ್.ವೇಣುಗೋಪಾಲ್, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯೆ ರೇವತಿ, ಪ್ರೇಮಾ ನಿಂಗಪ್ಪ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.