ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಿದ್ದ ವಿಶೇಷ ವಾರ್ಷಿಕ ಶಿಬಿರದಲ್ಲಿ ಉಪನ್ಯಾಸಕಿ ಡಾ.ಛಾಯಾ ಉದ್ಘಾಟಿಸಿದರು. ಜಗನ್‌ಪಾಲ್, ಲಲಿತಾ, ಪ್ರಾಂಶುಪಾಲ ಮೋಹನ್‌ಕುಮಾರ್ ಇತರರು ಇದ್ದರು.
ಶನಿವಾರಸಂತೆ: ಸ್ವಯಂ ಸೇವಕರ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆಯಾಗಿದೆ ಎಂದು ಸೋಮವಾರಪೇಟೆ ಸಂತ ಜೋಸೆಫರ ಪದವಿ ಕಾಲೇಜಿನ ಉಪನ್ಯಾಸಕಿ ಡಾ.ಛಾಯಾ ಹೇಳಿದರು.
ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿರುವ 2025-26ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ವಾರ್ಷಿಕ ಶಿಬಿರದಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಬಿರಾರ್ಥಿಗಳಲ್ಲಿ ನಾಯಕತ್ವದ ಹೊಣೆಗಾರಿಕೆ, ಸಮಾಜ ಸೇವೆಯ ಮನೋಭಾವನೆ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತಿರುವುದನ್ನು ತನ್ನ ಜೀವನದ ಉದ್ದಕ್ಕೂ ತನ್ನಲ್ಲಿ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಶಿಬಿರಾಧಿಕಾರಿ ಹರೀಶ್ ಮಾಗಿಲು ವಾರ್ಷಿಕ ಶಿಬಿರದ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು. ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಂ.ಜಗನ್‌ಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಸಂಸ್ಥೆ ಉಪಾಧ್ಯಕ್ಷ ಮಹಮ್ಮದ್ ಪಾಷ, ಪ್ರಾಂಶುಪಾಲ ಎಸ್.ಎನ್.ಮೋಹನ್ ಕುಮಾರ್, ಪ.ಪೂ.ಕಾಲೇಜು ಪ್ರಾಂಶುಪಾಲ ಎಸ್.ಜೆ.ಅಶೋಕ್, ಪ್ರೌಢಶಾಲಾ ಮುಖ್ಯ ಶಿಕ್ಷಕ ನರಸಿಂಹಮೂರ್ತಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಲಲಿತಾ, ಕಾಲೇಜು ಉಪನ್ಯಾಸಕ ಬಿ.ಎಂ.ಪೊನ್ನಪ್ಪ ಇತರರು ಇದ್ದರು.