ಎಚ್.ಬಿ.ರಮೇಶ್  
ಕೊಡಗು

ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್‌ಗೆ ಆಕ್ಷೇಪ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಎಸ್‌ಐಆರ್ ಮುಗಿಯುವವರೆಗೆ ಮುಂದೂಡಲು ಸಿಪಿಐ(ಎಂ) ಒತ್ತಾಯ
ಸಿದ್ದಾಪುರ : ಪಡಿತರದಾರರ ರೇಷನ್ ಕಾರ್ಡ್ ಮಾಹಿತಿಯನ್ನು ಜಾತಿ ಪ್ರಮಾಣ ಪತ್ರದೊಂದಿಗೆ ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ರಾಜ್ಯ ಸರ್ಕಾರ ಆರಂಭಿಸಿರುವುದಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ಜಿಲ್ಲಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.
ಸರ್ಕಾರದ ಉದ್ದೇಶ ಕಲ್ಯಾಣ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಗುರುತಿಸುವುದಾಗಿದೆ. ಆದರೆ ಕೊಡಗು ಜಿಲ್ಲೆಯ ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಎಸ್‌ಸಿ/ಎಸ್‌ಟಿ ಮಾತ್ರವಲ್ಲದೆ ಇತರ ಸಮುದಾಯದವರೆಗೂ ಜಾತಿ ದೃಢೀಕರಣ ಪತ್ರ ಕೇಳಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟುಮಾಡಿದೆ. ಆಹಾರ ಇಲಾಖೆ ತಕ್ಷಣವೇ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವ ಮೂಲಕ ಜನರಲ್ಲಿ ಉಂಟಾಗಿರುವ ಗೊಂದಲ ನಿವಾರಿಸಬೇಕು ಎಂದು ಜಿಲ್ಲಾ ಕಾರ್ಯದರ್ಶಿ ಎಚ್.ಬಿ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ವೇಳೆಯೇ ಮ್ಯಾಪಿಂಗ್ ಕಾರ್ಯ ಕೈಗೊಂಡಿರುವುದು ಸೂಕ್ತವಲ್ಲ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್ ಪ್ರಕ್ರಿಯೆ ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.