ಟಿ.ಕೆ.ಸುಬ್ಬಯ್ಯ ಮೃತರು. 
ಕೊಡಗು

ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಮಾದೇಶ್ ತಿ.ನರಸೀಪುರ
ಸೋಮವಾರಪೇಟೆ: ನಡ್ಲುಕೊಪ್ಪ ಗ್ರಾಮದಲ್ಲಿ ಸೋಮವಾರ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೃಷಿಕ ಟಿ.ಕೆ.ಸುಬ್ಬಯ್ಯ(78) ಆತ್ಮಹತ್ಯೆ ಮಾಡಿಕೊಂಡವರು. ಕೆಲ ತಿಂಗಳಿಂದ ಕಾಲು ನೋವು ಸೇರಿದಂತೆ ಅನಾರೋಗ್ಯದಿಂದ ಬಳಲುತ್ತಿದ್ದ ಸುಬ್ಬಯ್ಯ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಮುಂಜಾನೆ 6 ಗಂಟೆ ಅಮಯದಲ್ಲಿ ಮನೆ ಸಮೀಪವೇ ಗುಂಡು ಹಾರಿಸಿಕೊಂಡಿದ್ದಾರೆ.
ಮಾಹಿತಿ ಪಡೆದ ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.