onam festival 
ಕೊಡಗು

ಸೋಮವಾರಪೇಟೆಯಲ್ಲಿ ಓಣಂ ಉತ್ಸವ ನಾಳೆ

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಹಿಂದು ಮಲಯಾಳ ಸಮಾಜದ ವತಿಯಿಂದ ಆಯೋಜನೆ
ಸೋಮವಾರಪೇಟೆ:ತಾಲೂಕು ಹಿಂದು ಮಲಯಾಳ ಸಮಾಜದ ವತಿಯಿಂದ ನ.16 ರಂದು ಜಾನಕಿ ಕನ್ವೆನ್ಷನ್ ಸಭಾಂಗಣದಲ್ಲಿ ಓಣಂ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಮಾಜದ ತಾಲೂಕು ಅಧ್ಯಕ್ಷ ವಿ.ಎಂ.ವಿಜಯ ಹೇಳಿದರು.
ಬೆಳಗ್ಗೆ 7ಗಂಟೆಯಿಂದ 8.30ರ ತನಕ ಪೊಕಳಂ ಸ್ವರ್ಧೆ ಏರ್ಪಡಿಸಲಾಗಿದೆ. 9 ಗಂಟೆಗೆ ಸಿಂಗಾರಿ ಮೇಳ ವಾದ್ಯಗೋಷ್ಠಿಯೊಂದಿಗೆ ಶ್ರೀಮುತ್ತಪ್ಪ ದೇವಾಲಯದ ಸಮೀಪದಿಂದ ಓಣಂ ಘೋಷಯಾತ್ರೆ ಪ್ರಾರಂಭವಾಗಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕೇರಳ ಕಾಞಂಗಾಡು ಗೃಹಸ್ಥಾಶ್ರಮದ ಗಂಗಾಜೀ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಡಾ.ಮಂತರ್‌ಗೌಡ, ಎ.ಎಸ್.ಪೊನ್ನಣ್ಣ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಎಂಎಲ್‌ಸಿ ಸುಜಾ ಕುಶಾಲಪ್ಪ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಬಿ.ಎ.ಜೀವಿಜಯ, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಸಮಿತಿ ಸದಸ್ಯ ಹರಪಳ್ಳಿ ರವೀಂದ್ರ, ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಶಿಕುಮಾರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಗಂಟೆಗೆ ನೃತ್ಯ ಸ್ಪರ್ಧೆ, ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಂಜೆ 5ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಮಾಧವನ್, ಸಮಾಜದ ಕಾರ್ಯದರ್ಶಿ ಎಂ.ಕೆ.ಮೋಹನ್, ಉಪಾಧ್ಯಕ್ಷ ಎಸ್.ಐಯ್ಯಪ್ಪ, ನಿರ್ದೇಶಕರಾದ ಗೀತಾಮೋಹನ್, ಸುಚಿತ್ರಾ, ಕೆ.ಬಿ.ಕೃಷ್ಣ ಇದ್ದರು.