ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಒಂದು ಗಿಡ ತಾಯಿಯ ಹೆಸರಿನಲ್ಲಿ ಕಾರ್ಯಕ್ರಮವನ್ನು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ನಾಪಂಡ ರವಿ ಕಾಳಪ್ಪ, ಮಾಚಿಮಂಡ ಸುವಿನ್ ಗಣಪತಿ, ಕೆ.ಜಿ. ಬೋಪಯ್ಯ, ಕುಟ್ಟಂಡ ಅಜಿತ್ ಕರುಂಬಯ್ಯ, ಮುರಳೀಧರ್ ಮತ್ತಿತರರು ಇದ್ದರು. 
ಕೊಡಗು

ಜನರು ನೆಮ್ಮದಿಯಿಂದ ಬದುಕುವಂತಾಗಬೇಕು

ಸುನಿಲ್ ಪೊನ್ನೇಟಿ
ಗೋಣಿಕೊಪ್ಪಲು:
ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿಯೊಂದಿಗೆ ಜನರಿಗೆ ನೆಮ್ಮದಿಯಿಂದ ಬದುಕುವ ಅವಕಾಶ ಕೂಡ ನಿರ್ಮಾಣ ಆಗಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆದ ಒಂದು ಗಿಡ ತಾಯಿಯ ಹೆಸರಿನಲ್ಲಿ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಿದ್ದರೂ ಪ್ರಾಕೃತಿಕ ವಿಕೋಪಗಳು ಸಂಭವಿಸಿದೆ ಹಾಗೂ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಿದೆ.
ವನ್ಯಜೀವಿ ಮಾನವ ಸಂಘಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಕೃತಿಗೆ ಸಂಬAಧಿಸಿದ ಸಮಸ್ಯೆಗಳು ಇದೆ. ಇದಕ್ಕೆ ಪೂರಕವಾಗಿ ಹಸಿರು ಹೊದಿಕೆ ಹೆಚ್ಚಿಸುವ ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕಿದೆ. ಪರಿಸರ ಕಾಳಜಿಯಿಂದ ಕೈಗೊಳ್ಳುವ ಕಾರ್ಯಕ್ರಮಗಳಿಗೆ ಸಮಾಜದಲ್ಲಿ ಸಕಾರಾತ್ಮಕವಾದ ಪ್ರತಿಕ್ರಿಯೆಗಳು ಸಿಗಲಿದೆ ಎಂದು ಹೇಳಿದರು.
ಎಂಎಲ್‌ಸಿ ಮಂಡೇಪAಡ ಸುಜಾಕುಶಾಲಪ್ಪ ಮಾತನಾಡಿ ಹಸಿರೆಲೆ ಗೊಬ್ಬರಗಳ ಬಳಕೆ ಕಡೆಗೆ ಹೆಚ್ಚು ಗಮನ ಹರಿಸಬೇಕು. ಹಿರಿಯರು ಕಿರಿಯರಿಗೆ ತಮ್ಮ ತೋಟಗಳಲ್ಲಿ ಕೃಷಿಯ ಜವಾಬ್ದಾರಿಯನ್ನು ಅರಿವಿಕೆಗೆ ತರುವ ಮೂಲಕ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಬೇಕು. ಇದರಿಂದ ಪರಿಸರ ಕಾಳಜಿ ಕೂಡ ಹೆಚ್ಚಾಗಲಿದೆ ಎಂದು ಹೇಳಿದರು.
ಇದೇ ವೇಳೆ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಕೇಂದ್ರ ಸರ್ಕಾರ ಕಾರ್ಯಕ್ರಮವಾದ ಕೃಷಿ ಭೂಮಿ ಉಳಿಸಿ ಅಭಿಯಾನದ ಅಂಗವಾಗಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಯದುವೀರ್ ಒಡೆಯ್ ಸಸಿ ನಡೆವ ಮೂಲಕ ಜಾಗೃತಿ ಮೂಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಮಾಜಿ ಶಾಸಕ ಕೆ.ಜಿ ಬೋಪಯ್ಯ, ಮಂಡಲ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಜಿಲ್ಲಾ ಉಪಾಧ್ಯಕ್ಷರುಗಳಾದ ಅರುಣ್ ಭೀಮಯ್ಯ, ಗುಮ್ಮಟ್ಟೀರ ಕಿಲನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲೀರ ಚಲನ್ ಕುಮಾರ್, ಕೆವಿಕೆ ಮುಖ್ಯಸ್ಥ ಮುರಳೀಧರ್ ಇದ್ದರು.