ಕೊಡಗು ಪತ್ರಕರ್ತರÀ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಸಾಧಕ ಕೃಷಿಕರಿಗೆ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆರ್.ಕೆ. ಬಾಲಚಂದ್ರ, ಕೇಶವ ಕಾಮತ್, ಅನಿಲ್ ಹೆಚ್.ಟಿ., ಎಸ್.ಜಿ. ಶ್ರೀನಿವಾಸ್, ಮಂಡೆಪAಡ ಚಿಮ್ಮ ಉತ್ತಪ್ಪ ಮತ್ತಿತರರು ಇದ್ದರು.
ಕೊಡಗಿನಲ್ಲಿ ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೃಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ಕೊಡುವ ಹಲವಾರು ಅವಕಾಶಗಳಿವೆ ಎಂದು ಬ್ಯಾಂಕಿAಗ್, ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾರ್ಗದರ್ಶಕ ಆರ್.ಕೆ. ಬಾಲಚಂದ್ರ ಹೇಳಿದರು.
ಕೊಡಗು ಪತ್ರಕರ್ತರÀ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ಆಯೋಜಿಸಿದ್ದ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು ವಿಷಯದಲ್ಲಿ ಉಪನ್ಯಾಸ ನೀಡಿದರು.
ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ.30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ರ‍್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ ನಿದ್ದೆ ಕೆಡಿಸಿವೆ. 2018ರ ಭೀಕರ ಪ್ರವಾಹ ಮತ್ತು ಭೂಕುಸಿತ ಕೊಡಗಿನ ಕೃಷಿಕರನ್ನು ಹೈರಾಣಾಗಿಸಿದೆ. ಇದರಿಂದಾಗಿ ಯುವ ತಲೆಮಾರು ಬೆಂಗಳೂರಿಗೆ ವಲಸೆ ಹೋಗುತ್ತಿದ್ದಾರೆ. ತೋಟ ಉಳಿಸಿಕೊಳ್ಳಲು ದಾರಿ ಕಾಣದೆ ಕಾಫಿ ಬೆಳೆಗಾರರ ಮಕ್ಕಳು ಬೆಂಗಳೂರಿನಲ್ಲಿ ಕಾಫಿ ಮಾರುವ ಪರಿಸ್ಥಿತಿಗೆ ತಲುಪಿದ್ದಾರೆ.
ಆದರೆ ಕೊಡಗಿನ ರೈತರು ಮನಸ್ಸು ಮಾಡಿದರೆ ಕೃಷಿ ಪ್ರವಾಸೋದ್ಯಮದ ಮೂಲಕ ಬೆಂಗಳೂರಿಗರೇ ಇಲ್ಲಿನ ರೈತರ ಬಳಿ ಬರುವಂತೆ ಮಾಡಬಹುದು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವಕಾಮತ್ ಮಾತನಾಡಿ ದೇಶದ ಬೆನ್ನೆಲುಬರಾಗಿರುವ ರೈತರಿಲ್ಲದ ನಾಡನ್ನು ಕಲ್ಪಿಸಿಕೊಳ್ಳುವುದೇ ಅಸಾಧ್ಯವಾಗಿದೆ. ಎಷ್ಟೇ ಆಧುನಿಕ ಸೌಲಭ್ಯಗಳಿದ್ದರೂ ಮನುಷ್ಯನಾದವನಿಗೆ ಅನ್ನ, ಆಹಾರಗಳಿಲ್ಲದೆ ಜೀವಿಸಲು ಸಾಧ್ಯವಿಲ್ಲ. ಇಂತಹ ಆಹಾರವನ್ನು ತನ್ನ ಶ್ರಮದ ಮೂಲಕ ಕಲ್ಪಿಸುವ ಕೃಷಿಕರಿಗೆ ಸಮಾಜ ಸದಾ ಕೃತಜ್ಞವಾಗಿರಬೇಕು ಮತ್ತು ಸರ್ಕಾರಗಳು ನೆರವಿಗೆ ನಿಲ್ಲಬೇಕು ಎಂದು ಹೇಳಿದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಕೋವಿಡ್ ಕಾಲಘಟ್ಟದಲ್ಲಿ ನಡೆದ ಕೆಲವು ಉತ್ತಮ ಸಂಗತಿಗಳಲ್ಲಿ, ನಗರದಿಂದ ಸ್ವಗ್ರಾಮಗಳಿಗೆ ಅನಿವಾರ್ಯವಾಗಿ ಮರಳಿ ಬಂದ ಯುವಪೀಳಿಗೆ ನಂತರದ ದಿನಗಳಲ್ಲಿ ಕೃಷಿಯತ್ತ ಆಸಕ್ತಿ ವಹಿಸಿರುವುದೂ ಒಂದಾಗಿದೆ. ಇಂದಿಗೂ ವರ್ಕ್ ಫ್ರಂ ಹೋಂನಿAದಾಗಿ ಅನೇಕರು ತೋಟಗಳಲ್ಲಿಯೇ ಇದ್ದುಕೊಂಡು ಉದ್ಯೋಗ ಮತ್ತು ಕೃಷಿಯನ್ನು ನಿರ್ವಹಿಸುತ್ತಿರುವುದು ಆಶಾದಾಯಕವಾಗಿದೆ ಎಂದರು.
ಸುಂಟಿಕೊಪ್ಪದ ಉದ್ಯಮಿ ಎಸ್.ಜಿ. ಶ್ರೀನಿವಾಸ್, ಮಂಡೆಪAಡ ಚಿಮ್ಮ ಉತ್ತಪ್ಪ ಮಾತನಾಡಿದರು. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ಕಾರ್ಯಕ್ರಮದಲ್ಲಿ ಚಿಕ್ಕಬೆಟ್ಟಗೇರಿಯ ಉದ್ಯಮಿ ಎಂ.ಎಸ್.ರAಜಿತ್, ಸಂಘದ ಸಲಹೆಗಾರ ಕೆ. ತಿಮ್ಮಪ್ಪ, ಉಪಾಧ್ಯಕ್ಷ ನವೀನ್ ಚಿಣ್ಣಪ್ಪ, ಪ್ರಧಾನ ಕಾರ್ಯದರ್ಶಿ ವಿನ್ಸೆಂಟ್, ಖಜಾಂಚಿ ಕೆ.ಎಸ್. ಅನಿಲ್ ಕುಮಾರ್, ನಿರ್ದೇಶಕರಾದ ಸಿಲ್ವೆಸ್ಟರ್, ವಿಶ್ವಕುಮಾರ್, ರವಿಕುಮಾರ್, ಆಲ್‌ಫ್ರೆಡ್, ಶಿವಣ್ಣ, ಜಿ.ಕೆ. ಬಾಲಕೃಷ್ಣ, ಎಂ.ಎಸ್. ಸುನಿಲ್, ಸೋನ್ಸ್, ವಿರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುದೋಷ್ ಪೂವಯ್ಯ ಮತ್ತಿತರರು ಇದ್ದರು.
ನೇಗಿಲಯೋಗಿ ಪ್ರಶಸ್ತಿಯನ್ನು ಸುಂಟಿಕೊಪ್ಪದ ಪ್ರಗತಿಪರ ಕೃಷಿಕ ಪಟ್ಟೆಮನೆ ಪಿ. ಉದಯಕುಮಾರ್, ಕೃಷಿ ಮತ್ತು ಹೈನುಗಾರಿಕೆಗಾಗಿ ಮಳ್ಳೂರಿನ ಶಂಕರನಾರಾಯಣ, ಪ್ರಗತಿಪರ ಮಹಿಳಾ ಕೃಷಿಕರಾದ ಮಣಜೂರಿನ ಭವಾನಿ ಎಂ.ಜಿ.ಕುಮಾರಸ್ವಾಮಿ, ಬಾಳುಗೋಡುವಿನ ಸಮಗ್ರ ಕೃಷಿಕ ನಂಗಾರು ಜಗ ಅವರಿಗೆ ಪ್ರದಾನ ಮಾಡಲಾಯಿತು.