ಸಿದ್ದಾಪುರದಲ್ಲಿ ನಡೆದ ಪೊಲೀಸ್ ಪಥಸಂಚಲನ.
ಸಿದ್ದಾಪುರ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಿದ್ದಾಪುರ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು.
ಗುರುವಾರ ಸಂಜೆ ಆಯೋಜಿಸಿದ್ದ ಪಥಸಂಚಲನವು ಸಂತ ಅನ್ನಮ್ಮ ಶಾಲೆ ಬಳಿಯಿಂದ ಆರಂಭವಾಗಿ ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಮಾರ್ಗವಾಗಿ ಮಾರ್ಕೆಟ್ ರಸ್ತೆಯವರೆಗೆ ನಡೆಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಸಿಬ್ಬಂದಿ ಶಿಸ್ತಿನ ಮೆರವಣಿಗೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಪಥಸಂಚಲನ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ರಮ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಸಾರ್ವಜನಿಕರಿಗೆ ರವಾನಿಸುವುದು ಇದರ ಉದ್ದೇಶವಾಗಿದೆ. ಪಥಸಂಚಲನದ ವೇಳೆ ಪೊಲೀಸರು ಶಂಕಾಸ್ಪದ ಚಟುವಟಿಕೆ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಿದರು.