ಪೊನ್ನಂಪೇಟೆ ತಾಲೂಕಿನ ನಿಟ್ಟೂರಿನಲ್ಲಿ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಶಾಸಕ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ತಿತೀರ ಧರ್ಮಜ ಉತ್ತಪ್ಪ, ನವೀನ್, ಪವನ್ ಚಿಟ್ಟಿಯಪ್ಪ ಇತರರಿದ್ದರು. 
ಕೊಡಗು

ಬುಡಕಟ್ಟು ಆದಿವಾಸಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕಿನ ನಿಟ್ಟೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ಬುಡಕಟ್ಟು ಆದಿವಾಸಿ ವಸತಿ ಶಾಲೆಯ ಅಭಿವೃದ್ಧಿಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಈ ಶಾಲೆಗೆ ನೂತನ ಕಟ್ಟಡ ನಿರ್ಮಿಸಲು ಶನಿವಾರ ಶಾಸಕ ಅಜ್ಜಿಕುಟ್ಟೀರ ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಈ ಶಾಲೆಯ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಸರ್ಕಾರದ ವತಿಯಿಂದ ಎರಡು ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ. ಬುಡಕಟ್ಟು ಹಾಗೂ ಆದಿವಾಸಿ ಜನಾಂಗದ ಏಳಿಗೆಗೆ ಸರ್ಕಾರ ಸದಾ ಬೆಂಬಲವಾಗಿ ನಿಲ್ಲುತ್ತದೆ. ಇಲ್ಲಿಯ ಮಕ್ಕಳು ಪ್ರತಿಭಾವಂತರಾಗಿದ್ದು ಅವರಿಗೆ ವಿದ್ಯೆ ನೀಡಿ ಸಮಾಜದಲ್ಲಿ ಮುನ್ನೆಲೆಗೆ ತರುವ ಉದ್ದೇಶ ಸರ್ಕಾರಕ್ಕೆ ಇದೆ. ಇಲ್ಲಿಯ ನಿವಾಸಿಗಳು ಇದರ ಸದುಪಯೋಗವನ್ನು ಪಡೆದುಕೊಂಡು, ತಮ್ಮ ಮಕ್ಕಳ ವಿದ್ಯಾಭ್ಯಾಸದತ್ತ ಗಂಭೀರ ಗಮನಹರಿಸುವಂತಾಗಲು ವಸತಿ ಶಾಲೆಗೆ ಸಕಲ ಆಧುನಿಕ ಸೌಲಭ್ಯವನ್ನು ಕಲ್ಪಿಸಿ ಮಕ್ಕಳ ಸುಸೂತ್ರ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಪೋರಂಗಡ ಪವನ್ ಚಿಟ್ಟಿಯಪ್ಪ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣ್ಣಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು, ತಿತೀರ ಚೋಂದಮ್ಮ, ಸುಬ್ಬಯ್ಯ, ನಿಟ್ಟೂರು ಮಾಜಿ ಪಂಚಾಯಿತಿ ಸದಸ್ಯ ಅಪ್ಪಣ್ಣ, ಬಾಳಲೆ ಪಂಚಾಯಿತಿ ಮಾಜಿ ಸದಸ್ಯ ವಿನು ಉತ್ತಪ್ಪ, ಅಜ್ಜಿಕುಟ್ಟಿರ ಪೊನ್ನು, ಗಿರೀಶ್, ಸುಕು ಬೋಪಣ್ಣ, ದಿಲ್ಲು, ಸಾಜಿ ಅಚ್ಚುತನ್, ಐಟಿಡಿಪಿ ಇಲಾಖೆಯ ಅಧಿಕಾರಿಗಳು, ಶಾಲಾ ಸಿಬ್ಬಂದಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.