ಜಿಲ್ಲಾ ಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಫುಟ್ಬಾಲ್ ಪಂದ್ಯಾಟ ಗಮನ ಸೆಳೆಯಿತು.
ಈ ತಂತ್ರಜ್ಞಾನ ಯುಗದಲ್ಲಿ ಆಧುನಿಕ ರೂಪದಲ್ಲಾದರೂ ಕೆಸರುಗದ್ದೆ ಕ್ರೀಡಾಕೂಟ ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ)ಅಧ್ಯಕ್ಷ ದುದ್ದಿಯಂಡ ಎಚ್.ಸೂಫಿ ಹಾಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ(ಕೆಎಂಎಸ್‌ಎ) ವತಿಯಿಂದ ಭಾನುವಾರ ವಿರಾಜಪೇಟೆ-ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಕೊಮ್ಮೆತೋಡು ಸೇತುವೆ ಬಳಿಯ ಭತ್ತದ ಗದ್ದೆಯಲ್ಲಿ ಮೊದಲನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾ ಸಂಗಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಯುವ ಜನಾಂಗಕ್ಕೆ ಕೃಷಿ ಸಂಸ್ಕೃತಿಯನ್ನು ನೆನಪಿಸಲು ಹಾಗೂ ಸಾಮರಸ್ಯ ಮೂಡಿಸಲು ಇಂತಹ ಗ್ರಾಮೀಣ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿವೆ. ಕೊಡಗಿನ ಮೂಲ ಸಂಸ್ಕೃತಿ ಉಳಿವಿಗೂ ಕೆಸರುಗದ್ದೆ ಕ್ರೀಡಾಕೂಟ ಪ್ರೇರಣೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಬಿಜೆಪಿ ಮುಖಂಡ ಗುಮ್ಮಟ್ಟೀರ ಕಿಲನ್ ಗಣಪತಿ ಮಾತನಾಡಿ, ಪ್ರಸ್ತುತ ಸಾಮಾಜಿಕ ಪರಿಸ್ಥಿತಿಯಲ್ಲಿ ಜಾತಿ, ಮತ, ಜನಾಂಗಗಳ ನಡುವೆ ವಿವಿಧತೆಯಲ್ಲಿ ಏಕತೆಯನ್ನು ತರಲು ಕ್ರೀಡಾಕೂಟ ಪ್ರಬಲವಾದ ಸಾಧನವಾಗಿದೆ ಎಂದು ಹೇಳಿದರು.
ಕೆಎಂಎಸ್‌ಎ ಗೌರವಾಧ್ಯಕ್ಷ ಅಕ್ಕಳತಂಡ ಎಸ್.ಮೊಯ್ದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೊಮ್ಮೆತೊಡು(ಐಮಂಗಲ) ಜಮಾಅತ್ ಅಧ್ಯಕ್ಷರಾದ ಪೊಯಕೆರ ಎಸ್.ರಫೀಕ್, ಬೆಮ್ಮತಿ ಜಮಾಅತ್ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್(ಬಾಪು), ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್, ಪೊನ್ನಂಪೇಟೆಯ ಕೂರ್ಗ್ ರೈಸ್ ಟ್ರೇಡರ್ಸ್‌ನ ಮಾಲೀಕ ಕೆ.ಎಂ.ಇಬ್ರಾಹಿಂ, ಅಮ್ಮತ್ತಿಯ ಸಮಾಜ ಸೇವಕರಾದ ಅನಿಲ್, ಗೋಣಿಕೊಪ್ಪಲಿನ ಉಮ್ಮರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕೆ.ಎಂ.ಎಸ್.ಎ.ಉಪಾಧ್ಯಕ್ಷ ಕೆಂಗೋಟಂಡ ಎಸ್.ಸೂಫಿ, ಕುಂಡಂಡ ಎ.ರಜ್ಹಾಕ್, ಕೋಶಾಧಿಕಾರಿ ಆಲೀರ ಎ.ಅಬ್ದುಲ್ ಅಜೀಜ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೆಎಂಎಸ್‌ಎ ಅಧ್ಯಕ್ಷ ಆಲೀರ ಎಂ.ರಶೀದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಎಂಎಸ್‌ಎ ಪ್ರಧಾನ ಕಾರ್ಯದರ್ಶಿ ಮೀತಲ್ ತಂಡ ಎಂ.ಇಸ್ಮಾಯಿಲ್, ಕ್ರೀಡಾ ಸಂಚಾಲಕರಾದ ಕತ್ತಣಿರ ಎ.ಅಂದಾಯಿ, ಕಾರ್ಯದರ್ಶಿ ಬಲ್ಯತ್ಕಾರಂಡ ಯು.ಅಶ್ರಫ್ ಮತ್ತಿತರರು ಹಾಜರಿದ್ದರು.
ಜಿಲ್ಲಾ ಮಟ್ಟದ ಮುಕ್ತ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಫುಟ್ಬಾಲ್ ಪಂದ್ಯಾಟ ಗಮನ ಸೆಳೆಯಿತು.