ಕರಡಿಗೋಡು ಬಸವೇಶ್ವರ ಹಬ್ಬದಲ್ಲಿ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾಗಿಯಾಗಿ ವಿಶೇಷ ವಿಶೇಷ ಪೂಜೆ ಸಲ್ಲಿಸಿದರು. 
ಕೊಡಗು

ಬಸವೇಶ್ವರ ಹಬ್ಬದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪೊನ್ನಣ್ಣ

ಪ್ರಮುಖ ಮುಖ್ಯಾಂಶಗಳು

  • ಕರಡಿಗೋಡು ಗ್ರಾಮ
  • ಶ್ರೀ ಬಸವೇಶ್ವರ ಹಬ್ಬದ ಉತ್ಸವ
ಸಿದ್ದಾಪುರ: ಸಮೀಪದ ಕರಡಿಗೋಡು ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಬಸವೇಶ್ವರ ಹಬ್ಬದ ಉತ್ಸವದಲ್ಲಿ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭಾಗವಹಿಸಿ ದೇವರಿಗೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಶಾಸಕರಾಗಿ ಆಯ್ಕೆಯಾದ ನಂತರ ಸತತ ಮೂರನೇ ವರ್ಷವೂ ಅವರು ಬಸವೇಶ್ವರ ದೇವರ ಸನ್ನಿಧಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿರುವುದು ವಿಶೇಷವಾಗಿತ್ತು. ಮಹಾಪೂಜೆ ಸಂದರ್ಭದಲ್ಲಿ ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದ ಅವರು, ನಾಡಿನ ಸಮಸ್ತ ಜನತೆಗೆ ಒಳಿತಾಗಲಿ ಎಂದು ಕೋರಿದರು.
ವಲಯ ಅಧ್ಯಕ್ಷ ಪ್ರತೀಶ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷ ಕುಲಚಂಡ ಪ್ರಮೋದ್ ಗಣಪತಿ, ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಕುಂಡಚ್ಚಿರ ಮಂಜು ದೇವಯ್ಯ, ಮಾಲ್ದಾರೆ ಪಂಚಾಯಿತಿ ಅಧ್ಯಕ್ಷೆ ಮಾಲತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.