ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು. ಶೇಖರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ 2007ರ ಘೋಷಣೆಯಂತೆ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಪ್ರತೀ ವರ್ಷ ಸೆ. 15 ರಂದು ಆಚರಿಸಲಾಗುತ್ತಿದೆ. ಆದ್ದರಿಂದ ಈ ಬಾರಿಯು ಸಹ ಕಾರ್ಯಕ್ರಮ ಆಯೋಜನೆ ಸಂಬAಧಿಸಿದAತೆ ಸರ್ಕಾರದ ನಿರ್ದೇಶನದಂತೆ ಅಗತ್ಯ ಕ್ರಮವಹಿಸಬೇಕು.
ಸಮಾಜ ಕಲ್ಯಾಣ, ಶಾಲಾ ಶಿಕ್ಷಣ, ಕಾನೂನು ನ್ಯಾಯ, ಮಾನವ ಹಕ್ಕುಗಳು ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಜಿಲ್ಲೆಯ ತಾಲೂಕು ಮಟ್ಟದಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಆಚರಿಸಬೇಕು. ಪ್ರಜಾಪ್ರಭುತ್ವ ವಿಚಾರಧಾರೆಯನ್ನು ಸಾರ್ವಜನಿಕರಿಗೆ ಹಾಗೂ ಯುವಕರಿಗೆ ತಿಳಿಸಬೇಕಾದ ಅಗತ್ಯತೆ ಗಮನದಲ್ಲಿಟ್ಟುಕೊಂಡು ಸಾರ್ವಜನಿಕ ಕಾರ್ಯಕ್ರಮವನ್ನು ಏರ್ಪಡಿಸಬೇಕು.
ಸೆಪ್ಟೆಂಬರ್ 16 ರಿಂದ ನವೆಂಬರ್ 26ರ ವರೆಗೆ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಯುವ ಸಂಸತ್ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಇದೇ ಸೆಪ್ಟೆಂಬರ್, 15 ರಂದು ಯುವ ಸಂಸತ್ ಸಭೆಗೆ ಚಾಲನೆ ನೀಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಲು ಅಗತ್ಯ ಕ್ರಮವಹಿಸಲಾಗುವುದು. ಕಾರ್ಯಕ್ರಮದ ಸಂದರ್ಭದಲ್ಲಿ ಯುವ ಸಂಸತ್ ಸಭೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.