ಮೂರ್ನಾಡು ಕೊಡವ ಸಮಾಜದಲ್ಲಿ ನಡೆದ ಸ್ವಾತಂತ್ರ‍್ಯ ಹೋರಾಟಗಾರರ ಸ್ಮರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕೊಡವ ಸಮಾಜ ಮತ್ತು ಯುಕೋ ಸಂಘಟನೆ ಪ್ರಮುಖರು ಉಪಸ್ಥಿತರಿದ್ದರು. ಮಂಜು ಚಿಣ್ಣಪ್ಪ, ತೇಲಪಂಡ ಸುಬ್ಬಯ್ಯ, ಕೋಟೆರ ರಾಜ, ಕಾರ್ಯದರ್ಶಿ ಚಂಗAಡ ಸೂರಜ್ ತಮ್ಮಯ್ಯ, ಖಜಾಂಚಿ ಅಮ್ಮಾಟಂಡ ದೇವಯ್ಯ ಮತ್ತಿತರರು ಇದ್ದರು.
ಭಾರತ ಸ್ವಾತಂತ್ರ‍್ಯದ 80ನೇ ವರ್ಷದ ಅಂಗವಾಗಿ ಆಗಸ್ಟ್ 15ರಂದು ಮೂರ್ನಾಡು ಕೊಡವ ಸಮಾಜದಲ್ಲಿ ಯುನೈಟೆಡ್ ಕೊಡವ ಆರ್ಗನೈಜೇಷನ್ (ಯುಕೊ) ಹಾಗೂ ಮೂರ್ನಾಡು ಕೊಡವ ಸಮಾಜದ ಸಂಯುಕ್ತ ಆಶ್ರಯದಲ್ಲಿ ಎರಡನೇ ವರ್ಷದ ನೆಪ್ಪುರ ನಳತ್ ಮಾಂಜತ ಮೊಟ್ಟ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯುಕೊ ಪ್ರಮುಖ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ. ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಕೊಡಗಿನ ಕೊಡುಗೆ ಅಪಾರವಾಗಿದ್ದು, ಅನೇಕ ಸ್ವಾತಂತ್ರ‍್ಯ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಸಮರ್ಪಿಸಿದ್ದಾರೆ. ಆದರೆ ಅಂತಹ ನೈಜ ಹೋರಾಟಗಾರರಿಗೆ ಸರ್ಕಾರ ಹಾಗೂ ಸಮಾಜದಿಂದ ಸರಿಯಾದ ಗೌರವ ದೊರೆಯುತ್ತಿಲ್ಲ.
ಕಳೆದ ವರ್ಷ ಸ್ವಾತಂತ್ರ‍್ಯ ದಿನಾಚರಣೆಯಂದು ಪ್ರಥಮ ಬಾರಿಗೆ ಕೊಡಗಿನ ಸ್ವಾತಂತ್ರ‍್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮ ಆರಂಭಿಸಲಾಗಿದ್ದು, ಈ ಬಾರಿ ಎರಡನೇ ವರ್ಷದ ಕಾರ್ಯಕ್ರಮವನ್ನು ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸಲಾಗುತ್ತಿದೆ.
ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾಡಳಿತದವರೆಗೆ ಸ್ಥಳೀಯ ಸ್ವಾತಂತ್ರ‍್ಯ ಹೋರಾಟಗಾರರು ಹಾಗೂ ಸತ್ಯಾಗ್ರಹಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ನಡೆಯಬೇಕಿದೆ. ಇಲ್ಲವಾದಲ್ಲಿ ಈ ಮಣ್ಣಿನ ನೈಜ ಇತಿಹಾಸ ಮರೆಯಾಗುವ ಅಪಾಯವಿದೆ.
ಕಾರ್ಯಕ್ರಮದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರ ಕುರಿತು ವಿಚಾರ ವಿನಿಮಯ, ದೇಶಭಕ್ತಿ ಗೀತೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅವರ ಜೀವನ ಮತ್ತು ತ್ಯಾಗವನ್ನು ಪರಿಚಯಿಸುವ ವಿಶೇಷ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ ಎಂದು ತಿಳಿಸಿದರು.
ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ ಮಾತನಾಡಿ, ಕೊಡವರ ಇತಿಹಾಸ ಮತ್ತು ಅಸ್ತಿತ್ವವನ್ನು ಉಳಿಸಿಕೊಳ್ಳಲು ಸ್ವಾತಂತ್ರ‍್ಯ ಹೋರಾಟದಲ್ಲಿ ಪಾಲ್ಗೊಂಡ ಹಿರಿಯರ ತ್ಯಾಗವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಆಗಸ್ಟ್ 15ರಂದು ಮಧ್ಯಾಹ್ನ 1 ಗಂಟೆಗೆ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಹಾಗೂ ಮಡಿಕೇರಿ ಕ್ಷೇತ್ರಗಳ ಶಾಸಕರು, ಸಚಿವರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಸ್ಥರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಸಭೆಯಲ್ಲಿ ಮೂರ್ನಾಡು ಕೊಡವ ಸಮಾಜದ ಉಪಾಧ್ಯಕ್ಷ ಕೋಟೆರ ರಾಜ, ಕಾರ್ಯದರ್ಶಿ ಚಂಗAಡ ಸೂರಜ್ ತಮ್ಮಯ್ಯ, ಖಜಾಂಚಿ ಅಮ್ಮಾಟಂಡ ದೇವಯ್ಯ, ತಿರುಟೆರ ಮುದ್ದಯ್ಯ, ಚೇನಂಡ ಮಾದಪ್ಪ, ಪುದಿಯೊಕ್ಕಡ ವಿಪನ್ ಸೋಮಯ್ಯ, ಅಮ್ಮಾಟಂಡ ಕಾವೇರಪ್ಪ, ಚೌಕೀರ ಅಪ್ಪಣ್ಣ, ಪಳಂಗAಡ ಹರೀಶ್, ಮುಂಡAಡ ಜಮುನಾ ಪೆಮ್ಮಯ್ಯ, ಪಾಂಡAಡ ಸ್ವಾತಿ ಗಣಪತಿ, ಕುಂಜಿಲAಡ ಗ್ರೇಸಿ ಪೂಣಚ್ಚ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಪಳಂಗAಡ ರೇಖಾ, ಉಪಾಧ್ಯಕ್ಷೆ ಪೆಮ್ಮಂಡ ಗೀತಾ ಪವಿತ್ರ, ಅಮ್ಮಾಟಂಡ ವಿಂದ್ಯಾ ದೇವಯ್ಯ, ಯುಕೊ ಸದಸ್ಯ ಪುದಿಯೊಕ್ಕಡ ದಿನೇಶ್ ಹಾಗೂ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ಚೊಟ್ಟೆಯಂಡ ಸಂಜು ಕಾವೇರಪ್ಪ ಉಪಸ್ಥಿತರಿದ್ದರು.