ತೊರೆನೂರು ಮಠದಲ್ಲಿ ಶ್ರೀಮಲ್ಲೇಶ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪೂರ್ವಭಾವಿ ಸಭೆ ಆಯೋಜನೆಗೊಂಡಿತ್ತು. ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಅಧ್ಯಕ್ಷ ಎಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ ಇತರರು ಇದ್ದರು. 
ಕೊಡಗು

ಸುತ್ತೂರುಶ್ರೀ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಕುಶಾಲನಗರ: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಫೆ.19 ರಂದು ತೊರೆನೂರು ವಿರಕ್ತ ಮಠಕ್ಕೆ ಆಗಮಿಸಲಿದ್ದು, ಶ್ರೀಮಠದ ಮೂಲಗುರುಗಳ ಸಂಸ್ಮರಣೋತ್ಸವ ಹಾಗೂ ಶ್ರೀಮಹಾಂತ ಸ್ವಾಮೀಜಿಗಳ 13ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ತೊರೆನೂರು ಮಠದಲ್ಲಿ ಶ್ರೀಮಲ್ಲೇಶ ಸ್ವಾಮೀಜಿ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳನ್ನು ಆಹ್ವಾನಿಸುವ ತೀರ್ಮಾನ ಕೈಗೊಂಡಿರುವುದಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಅಧ್ಯಕ್ಷ ಎಚ್.ವಿ. ಶಿವಪ್ಪ ತಿಳಿಸಿದರು.
ಫೆ. 19 ರಂದು ತೊರೆನೂರು ಶ್ರೀಮಠದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಎಲ್ಲ ಮಠಾಧಿಪತಿಗಳು, ಕ್ಷೇತ್ರದ ಶಾಸಕರಾದ ಡಾ.ಮಂತರಗೌಡ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಮಾಜಿ ಸಚಿವರಾದ ಅಪ್ಪಚ್ಚು ರಂಜನ್, ಕೊಡಗು ವಿವಿ ಕುಲಪತಿಗಳಾದ ಡಾ.ಅಶೋಕ್ ಸಂಗಪ್ಪ ಆಲೂರ ಮತ್ತಿತರರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಕೊಡಗು ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಂಬಶಿವಯ್ಯ, ಉಪಾಧ್ಯಕ್ಷ ಎಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಎಚ್.ಎಂ. ಮಧುಸೂದನ್, ಪ್ರಧಾನ ಕಾರ್ಯದರ್ಶಿ ಧಮೇರ್ಂದ್ರ, ಶುಭಶೇಖರ್, ನಿರ್ದೇಶಕರಾದ ಲೋಕೇಶ್, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಬಿ.ಜಗದೀಶ್, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ತೊರೆನೂರು ವಿರೂಪಾಕ್ಷ, ಶಿವಾನಂದ ಇದ್ದರು.