ಕಸ್ತೂರಿರಂಗನ್ ವರದಿ ವಿರುದ್ಧ ಕೊಡಗು ರೈತ ಹೋರಾಟ ಸಮಿತಿಯಿಂದ ನಡೆದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆಯ ವಿವಿಧೆಡೆಯ ರೈತರು ಪಾಲ್ಗೊಂಡಿದ್ದರು. 
ಕೊಡಗು

ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಮಡಿಕೇರಿ:
ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ 7ನೇ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ಸಹಕಾರದಿಂದ ಕೊಡಗು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಜಿಲ್ಲೆಯ ಮೂಲೆ ಮೂಲೆಗಳಿಂದ ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಜ. ಕಾರ್ಯಪ್ಪ ವೃತ್ತದಿಂದ ಜ. ತಿಮ್ಮಯ್ಯ ವೃತ್ತದ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಜ. ತಿಮ್ಮಯ್ಯ ವೃತ್ತದದಲ್ಲಿ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟಿಸಿದರು. ಇದರಿಂದಾಗಿ ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ರೈತರಿಗೆ ಕಿರುಕುಳ ನೀಡುತ್ತಿರುವ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕು, ಕಸ್ತೂರಿ ರಂಗನ್ ವರದಿ ವಿರುದ್ಧ ನಿರ್ಣಯ ತೆಗೆದುಕೊಳ್ಳಲು ಗ್ರಾಮ ಸಭೆ ಕರೆಯದ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯೂ ಸ್ಥಳಕ್ಕೆ ಬರಬೇಕು. ಮುಕ್ಕೋಡ್ಲು ಗ್ರಾಮದಲ್ಲಿ ಅರಣ್ಯ ಭೂಮಿ ಎಂದು ಆರೋಪಿಸಿ ಕಡಿದು ನಾಶ ಮಾಡಲಾದ ಕಾಫಿ ತೋಟಕ್ಕೆ ಸ್ಥಳದಲ್ಲೇ ಪರಿಹಾರ ಕೊಡಬೇಕು. ಅಲ್ಲಿಯ ತನಕ ರಸ್ತೆ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಕೊನೆಗೆ ಕಾಫಿ ತೋಟ ಕಳೆದುಕೊಂಡ ಸಂತ್ರಸ್ತ ನಾಣಿಯಪ್ಪ ಅವರಿಗೆ ಜಿಲ್ಲಾಧಿಕಾರಿ 7 ಲಕ್ಷ ರೂ. ಪರಿಹಾರದ ವೈಯಕ್ತಿಕ ಚೆಕ್ ಈ ಕೂಡಲೇ ಕೊಡಲಾಗುವುದು ಎಂದು ಘೋಷಿಸಿದ ನಂತರ ಪ್ರತಿಭಟನಾಕಾರರು ರಸ್ತೆ ತಡೆ ಕೈ ಬಿಟ್ಟು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯ ನಂತರ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಲಾಯಿತು. ಕಸ್ತೂರಿ ರಂಗನ್ ವರದಿ ಜಾರಿಯಾಗುವುದನ್ನು ಈ ಸಭೆಯಲ್ಲಿ ಒಮ್ಮತದಿಂದ ಖಂಡಿಸಲಾಯಿತು. ಯಾವುದೇ ಕಾರಣಕ್ಕೂ ಈ ವರದಿ ಜಾರಿಯಾಗಬಾರದು ಎಂದು ನಿರ್ಣಯ ತೆಗೆದುಕೊಳ್ಳಲಾಯಿತು. ಇದೇ ವೇಳೆ ಸಂತ್ರಸ್ತರ ನಾಣಿಯಪ್ಪ ಅವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.