ಸುದ್ದಿಗೋಷ್ಠಿಯಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ನಂದಕುಮಾರ್ ಮಾತನಾಡಿದರು.
- ರಸ್ತೆ ದುರಸ್ತಿಗೆ ಆಗ್ರಹಿಸಿ ಡಿ.೨೬ರಂದು ಪ್ರತಿಭಟನೆ
ಮಡಿಕೇರಿ: ಮರಗೋಡು, ಹುಲಿತಾಳ, ಕತ್ತಲೆಕಾಡು, ಮಡಿಕೇರಿಗೆ ಹೋಗುವ ರಸ್ತೆ ದುರಸ್ತಿಗೆ ಆಗ್ರಹಿಸಿ ಡಿ.೨೬ರಂದು ಮರಗೋಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮರಗೋಡಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ನಂದಕುಮಾರ್ ತಿಳಿಸಿದ್ದಾರೆ.
ಮರಗೋಡು, ಹುಲಿತಾಳ,ಕತ್ತಲೆಕಾಡು ಮಡಿಕೇರಿಗೆ ಹಾದು ಹೋಗುವ ಮುಖ್ಯ ರಸ್ತೆಯು ಸುಮಾರು ೨೦ ವರ್ಷಗಳಿಂದ ಹದೆಗೆಟ್ಟಿದೆ. ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ಮಕ್ಕಳು, ವಾಹನ ಚಾಲಕರಿಗೂ ವಾಹನ ಓಡಿಸಲು ತುಂಬಾ ಕಷ್ಟಕರವಾಗಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಹಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ರಸ್ತೆ ಕಾಮಗಾರಿಗೆ ಆಗ್ರಹಿಸಿ ಡಿ.೨೬ರಂದು ಮರಗೋಡುನಿಂದ ಹುಲಿತಾಳದ ರಸ್ತೆಯನ್ನು ರಸ್ತೆತಡೆ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಕಾರ್ಯದರ್ಶಿ ನವನೀತ್ ಮಾತನಾಡಿ, ಈ ಹಿಂದೆ ರಸ್ತೆ ದುರಸ್ತಿಗೆ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ದುರಸ್ತಿಯಾಗಿಲ್ಲ. ರಸ್ತೆ ಅಭಿವೃದ್ಧಿ ಮಾಡದಿದ್ದಲ್ಲಿ ಮುಂಬರುವ ಚುನಾವಣೆಗೆ ಬಹಿಷ್ಕಾರ ಹಾಕಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಪ್ರದೀಪ್, ಖಜಾಂಜಿ ರಂಜು, ಗ್ರಾಮಸ್ಥರಾದ ಈಶ್ವರ್, ಕೌಶಿಕ್ ಇದ್ದರು.