ಸೋಮವಾರಪೇಟೆ ಮತ್ತು ಕುಶಾಲನಗರ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಸಂಬಂಧ ಸಚಿವ ಯು.ಟಿ .ಖಾದರ್ ಅವರೊಂದಿಗೆ ಶಾಸಕ ಡಾ.ಮಂತರ್‌ಗೌಡ ಚರ್ಚೆ ನಡೆಸಿದರು. 
ಕೊಡಗು

ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆಗೆ ಸೌಕರ್ಯ ಒದಗಿಸಿ

ಪ್ರಮುಖ ಮುಖ್ಯಾಂಶಗಳು

  • ಸಚಿವ ಯು.ಟಿ.ಖಾದರ್‌ಗೆ ಡಾ.ಮಂತರ್ ಗೌಡ ಮನವಿ
ಸೋಮವಾರಪೇಟೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರನ್ನು ಇತ್ತೀಚೆಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಂಗಳೂರಿನಲ್ಲಿ ಭೇಟಿ ಮಾಡಿ ಕ್ಷೇತ್ರದ ಆರೋಗ್ಯ ಸೇವೆಗಳ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ ನಡೆಸಿದರು.
ಕುಶಾಲನಗರ ತಾಲೂಕು ಆಸ್ಪತ್ರೆ ಹಾಗೂ ಸೋಮವಾರಪೇಟೆ ತಾಲೂಕು ಆಸ್ಪತ್ರೆಗೆ ಮೂಲ ಸೌಕರ್ಯ ಒದಗಿಸುವುದು, ವೈದ್ಯಕೀಯ ಸೌಲಭ್ಯಗಳ ವಿಸ್ತರಣೆ, ಅಗತ್ಯ ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.
ಕ್ಷೇತ್ರದ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ಹಾಗೂ ಅನುದಾನ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಮಾಡಿದರು. ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಾದರ್ ಭರವಸೆ ನೀಡಿರುವುದಾಗಿ ತಿಳಿಸಿದರು.