ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
- ಜೂ.೨೮ ರಿಂದ ಪಲ್ಸ್ ಪೊಲಿಯೊ ಲಸಿಕಾ ಕಾರ್ಯಕ್ರಮ
- ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಡಿಸಿ
ಮಡಿಕೇರಿ: ಜಿಲ್ಲೆಯಾದ್ಯಂತ ಜೂ.೨೮ ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.೨೮ ರಿಂದ ಜು.೧ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೊಲಿಯೋ ಹನಿ ನೀಡುವ ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ೫ ವ?ರ್ದವರೆಗಿನ ಒಟ್ಟು ೩೨,೭೦೨ ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ ೩,೨೭೫, ಗ್ರಾಮೀಣ ಭಾಗದಲ್ಲಿ ೨೯,೪೨೭ ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೫,೬೫,೩೩೮ ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ ೫೫,೧೭೯, ಗ್ರಾಮೀಣ ಭಾಗದಲ್ಲಿ ೫,೧೦,೧೫೯ ಜನ ಸಂಖ್ಯೆ ಇದೆ. ಇವರಲ್ಲಿ ವಲಸಿಗ ಮಕ್ಕಳ ಸಂಖ್ಯೆ ೪,೧೧೨ ಮತ್ತು ಸ್ಥಿರವಾಸಿತ ವಲಸೆ ಜನಸಂಖ್ಯೆಯು ೧೫,೭೮೮ ಸೇರಿ ಒಟ್ಟು ೧೯,೯೦೦ ಇರುತ್ತದೆ ಎಂದು ಮಾಹಿತಿ ನೀಡಿದರು.
ಎಲ್ಲಾ ಶಾಲೆಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜೂ.೨೬ ರಂದು ಜಾಥಾ ಮಾಡಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜೂ.೨೮ ರಂದು ಬೆಳಗ್ಗೆ ೮ ರಿಂದ ಬೂತ್ ಮಟ್ಟದಲ್ಲಿ ಪೊಲಿಯೊ ಹನಿ ನೀಡಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಗೆ ಪ್ರಾವಾಸಿಗರ ಸಂಖ್ಯೆ ಹೆಚ್ಚಾಗಿರುವುದರಿಂದ ಹಾಗೂ ಸ್ಥಿರವಾಸಿತ ವಲಸೆ ಮಕ್ಕಳ ಸಂಖ್ಯೆಯೂ ಹೆಚ್ಚಿರುವುದರಿಂದ ಮೂರು ದಿನಗಳ ಕಾಲ ನಗರ, ಪಟ್ಟಣ ಪ್ರದೇಶ ಭೇಟಿ ನೀಡಿ ಪೊಲಿಯೊ ಹನಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು ೧,೩೬,೨೧೪ ಮನೆಗಳಿದ್ದು, ಈ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ ಒಟ್ಟು ೪೭೦ ಬೂತ್‌ಗಳನ್ನು ಗುರುತಿಸಲಾಗಿದೆ. ೩೨ ಸಂಚಾರಿ ತಂಡ, ೧ ಮೊಬೈಲ್ ಸಂಚಾರಿ ತಂಡ ರಚಿಸಲಾಗಿದೆ. ಒಟ್ಟು ೧೯೪೬ ಲಸಿಕೆದಾರರನ್ನು ಗುರುತಿಸಲಾಗಿದ್ದು, ಮನೆ ಮನೆ ಭೇಟಿ ನೀಡಲು ಒಟ್ಟು ೯೭೩ ತಂಡಗಳನ್ನು ರಚಿಸಲಾಗಿದೆ. ಒಟ್ಟು ೮೫ ಮೇಲ್ವಿಚಾರಕರನ್ನು ಗುರುತಿಸಲಾಗಿದೆ. ಇವರುಗಳಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿವರಿಸಿದರು.
ಶಾಲಾ ಶಿಕ್ಷಣ ಇಲಾಖೆ ಜಾಗೃತಿ ಜಾಥಾ ಏರ್ಪಡಿಸಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ೫ ವ?ರ್ದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವಂತಾಗಬೇಕು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸ್ತ್ರೀ ಶಕ್ತಿ ಗುಂಪುಗಳ ಪದಾಧಿಕಾರಿಗಳು ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶೇಕಡವಾರು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಅವರು ಮನವಿ ಮಾಡಿದರು.
ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ಮೂಲಕ ಸ್ಥಳೀಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಪಲ್ಸ್ ಪೊಲಿಯೊ ಲಸಿಕೆ ಪಡೆಯುವಂತಾಗಲು ಜನ ಜಾಗೃತಿ ಮೂಡಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಬ್ಯಾನರ್‌ಗಳನ್ನು ಬರೆಸಿ ಹಾಗೂ ಬಿತ್ತಿ ಪತ್ರಗಳನ್ನು ಮುದ್ರಿಸಿ ಪ್ರದರ್ಶಿಸಬೇಕು. ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅಗತ್ಯ ವಾಹನಗಳ ನಿಯೋಜನೆ ಮಾಡಬೇಕು. ಬಸ್ ನಿಲ್ದಾಣಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಪಲ್ಸ್ ಪೊಲಿಯೊ ಲಸಿಕೆ ಪಡೆಯಲು ಅರಿವು ಮೂಡಿಸಬೇಕು. ಕಾರ್ಮಿಕ ಇಲಾಖೆ ಮೂಲಕ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೫ ವ?ರ್ದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವಂತಾಗಬೇಕು. ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸಬೇಕು. ವಿವಿಧ ಸಂಘ, ಸಂಸ್ಥೆಗಳು ಪಲ್ಸ್ ಪೊಲಿಯೊ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ವಿವಿಧ ಧಾರ್ಮಿಕ ಮುಖಂಡರು ಸಹ ಪಲ್ಸ್ ಪೊಲಿಯೊ ಲಸಿಕೆ ಮಹತ್ವ ಬಗ್ಗೆ ಜಾಗೃತಿ ಮೂಡಿಸಬೇಕು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ಘಟಕಕ್ಕೆ ಸ್ಥಳಾವಕಾಶ ನೀಡಿ ಲಸಿಕೆ ಪಡೆಯಲು ಅವಕಾಶ ಮಾಡಬೇಕು. ಹೀಗೆ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಕೋರಿದರು.
ಸಭೆಯಲ್ಲಿ ಡಾ.ಆನಂದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.