ರಾಜ್ಯ ಮಟ್ಟದ ರಂಗೋಲಿ ಸ್ಪರ್ಧೆಗೆ ಆಯ್ಕೆಯಾದ ತೋಳೂರು ಶೆಟ್ಟಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕೆ.ಎನ್.ಪುಣ್ಯ. 
ಕೊಡಗು

ರಾಜ್ಯಮಟ್ಟದ ರಂಗೋಲಿ ಸ್ಪರ್ಧೆಗೆ ಪುಣ್ಯ ಆಯ್ಕೆ

ಕೆಂಡಗಣ್ಣ ಎನ್

ಪ್ರಮುಖ ಮುಖ್ಯಾಂಶಗಳು

  • Rangoli competition
ಕುಶಾಲನಗರ: ಕೊಪ್ಪಳದಲ್ಲಿ ಫೆ.7 ಮತ್ತು 8ರಂದು ನಡೆಯಲಿರುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಕೊಡಗು ಜಿಲ್ಲೆಯಿಂದ ಕೆ.ಎನ್.ಪುಣ್ಯ ಆಯ್ಕೆಯಾಗಿದ್ದಾಳೆ.
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡ ತೋಳೂರು ಶೆಟ್ಟಳ್ಳಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕೆ.ಎನ್.ಪುಣ್ಯ ಪ್ರಥಮ ಸ್ಥಾನ ಗಳಿಸಿದ್ದಳು. ಇದೀಗ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ ಎಂದು ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ.
ಪುಣ್ಯಳನ್ನು ಶುಕ್ರವಾರ ಶಾಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಅಭಿನಂದಿಸಿ ಗೌರವಿಸಿದರು. ಶಾಲಾ ಶಿಕ್ಷಕರು ಇದ್ದರು.
ವಿದ್ಯಾರ್ಥಿನಿ ಪುಣ್ಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದ ಕೆ.ಎನ್.ನಾಗರಾಜ ಮತ್ತು ರಜನಿ ದಂಪತಿಯ ಪುತ್ರಿ.