ರಸಪ್ರಶ್ನೆ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು.
- ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
- ವಿವೇಕ ವೇದಿಕೆ
ನಾಪೋಕ್ಲು: ಸಮೀಪದ ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ವಿವೇಕ ವೇದಿಕೆ ವತಿಯಿಂದ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ನಬೀಲ್ ಪ್ರಥಮ ಸ್ಥಾನ ಪಡೆದರು.
7ನೇ ತರಗತಿ ವಿದ್ಯಾರ್ಥಿ ನಿತಿನ್ ಹಾಗೂ 6 ನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಬಹುಮಾನ ಗಳಿಸಿದರು.ಪ್ರಥಮ ಬಹುಮಾನವಾಗಿ 1500 ರೂ., ದ್ವಿತೀಯ ಬಹುಮಾನವಾಗಿ 1000 ರೂ.ಹಾಗೂ ತೃತೀಯ ಬಹುಮಾನವಾಗಿ 500 ರೂ.ನೀಡಲಾಯಿತು.
ಬಹುಮಾನ ವಿತರಿಸಿ ಮಾತನಾಡಿದ ವೇದಿಕೆಯ ನಿರ್ದೇಶಕ ಪೊಕ್ಕುಳಟಡ್ರ ಪ್ರಹ್ಲಾದ್, ಮಕ್ಕಳಲ್ಲಿ ಓದಿನ ಬಗ್ಗೆ ಹೆಚ್ಚು ಆಸಕ್ತಿ ಹೊಂದುವಂತಾಗಬೇಕು. ಅಲ್ಲದೆ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಪಾಠಕ್ಕೆ ಸಂಬಂಧಪಟ್ಟ ಹಾಗೂ ಸಾಮಾನ್ಯ ಜ್ಞಾನದ ಬಗ್ಗೆ ಪ್ರಶ್ನೆ ಕೇಳಲಾಯಿತು. ಮಕ್ಕಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆ ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಸಹ ಶಿಕ್ಷಕಿ ವಿನುತಾ, ಪವೀನಾ ಹಾಗೂ ಅತಿಥಿ ಶಿಕ್ಷಕಿ ಸರಸ್ವತಿ ಇದ್ದರು.